More

    ಹಾಸನದಲ್ಲಿ ಶ್ರದ್ಧಾ ಭಕ್ತಿಯ ಷಷ್ಠಿ ಆಚರಣೆ

    ಹಾಸನ: ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಚಂಪಾಷಷ್ಠಿ ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಮನೆಗಳಲ್ಲಿ ಸುಬ್ರಹ್ಮಣ್ಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಪ್ರಾರ್ಥನೆ ನೆರವೇರಿತು.

    ಹೇಮಾವತಿ ನಗರದಲ್ಲಿರುವ ಶ್ರೀ ಸುಬ್ರಮಣ್ಯ ದೇವರಿಗೆ ವಿಶೇಷ ಹೂವಿನ ಅಲಂಕಾರ ಮಾಡಿ ಪೂಜೆ ನೆರವೇರಿಸಲಾಯಿತು. ಬೆಳಗಿನಿಂದಲೇ ನೂರಾರು ಭಕ್ತರು ಸರದಿ ಸಾಲಿನಲ್ಲಿ ಬಂದು ದೇವರ ದರ್ಶನ ಪಡೆದರು. ಭಕ್ತರಿಗೆ ಪ್ರಸಾದ ವಿತರಿಸಲಾಯಿತು.

    ಸುಬ್ರಮಣ್ಯ ಸ್ವಾಮಿ ದೇವಸ್ಥಾನ ಅರ್ಚಕ ಗೋವಿಂದರಾಜು ಮಾತನಾಡಿ, ಡಿಸೆಂಬರ್‌ನಲ್ಲಿ ಆಚರಿಸಲಾಗುವ ಷಷ್ಠಿಗೆ ಹಬಕ್ಕೆ ಹಿಂದು ಸಂಪ್ರದಾಯದಲ್ಲಿ ಮಹತ್ವದ ಸ್ಥಾನವಿದೆ. ಈ ಬಾರಿ ಕರೊನಾ ಹೆಚ್ಚಿರುವ ಕಾರಣ ಸರಳ ಕಾರ್ಯಕ್ರಮ ಮಾಡಲಾಗಿದೆ. ಪರಸ್ಪರ ಅಂತರ, ಸ್ಯಾನಿಟೈಸರ್ ಹಾಗೂ ಮಾಸ್ಕ್ ಧರಿಸಿ ಭಕ್ತರಿಗೆ ಬರುವಂತೆ ಮನವಿ ಮಾಡಲಾಗಿದೆ ಎಂದರು.

    ಸುಬ್ರಮಣ್ಯ ಸ್ವಾಮಿ ದೇವಸ್ಥಾನ ಟ್ರಸ್ಟ್ ಪದಾಧಿಕಾರಿಗಳಾದ ಬಿ. ದೇವಸೇನಾಧಿಪತಿ, ನೆಲೆಯಪುರ್, ಮುರುಗೇಶ್, ಮಣಿ, ಷಣ್ಮುಗಂ, ಪರಮೇಶ್, ನವೀನ್, ರಾಮನಾಥನ್ ಹಾಗೂ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts