ಐತಿಹಾಸಿಕ 88ನೇ ಮಹಾಮಸ್ತಕಾಭಿಷೇಕಕ್ಕೆ ರಾಷ್ಟ್ರಪತಿಯವರಿಂದ ಚಾಲನೆ

ಹಾಸನ: ಜೈನಕಾಶಿ ಶ್ರವಣಬೆಳಗೊಳದಲ್ಲಿ ನಡೆಯುತ್ತಿರುವ ಐತಿಹಾಸಿಕ 88ನೇ ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ದೀಪ ಬೆಳಗುವುದರ ಮೂಲಕ ಚಾಲನೆ ನೀಡಿದ್ದಾರೆ.

ಭವ್ಯ ಚಾವುಂಡರಾಯ ಮಂಟಪದಲ್ಲಿ ಕಾರ್ಯಕ್ರಮ ಉದ್ಘಾಟನೆ ಮಾಡಲಾಗಿದ್ದು, ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಪತ್ನಿ ಸರಿತಾ ಅವರು ಕೂಡ ಭಾಗಿಯಾಗಿದ್ದಾರೆ.

ಜ್ಯೋತಿ ಬೆಳಗಿಸುವುದರ ಮೂಲಕ ಹಾಗೂ ಸ್ವರ್ಣ ಗೊಮ್ಮಟ ಪುತ್ತಳಿ ತೆರೆ ಸರಿಸುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಪಾಲ ವಜುಭಾಯಿ ವಾಲ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಸಚಿವ ಎ.ಮಂಜು ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಭಾಗವಹಿಸಿದ್ದಾರೆ.

ವೇದಿಕೆ ಮೇಲೆ ನೂರಕ್ಕೂ ಹೆಚ್ಚು ದಿಗಂಬರ ಮುನಿಗಳು, ಆಚಾರ್ಯರು ಮತ್ತು ಮಾತಾಜಿಯವರು ಭಾಗಿಯಾಗಿದ್ದರು. ಮಹಾಮಸ್ತಕಾಭಿಷೇಕ 12 ವರ್ಷಕ್ಕೊಮ್ಮೆ ಮಾತ್ರ ನಡೆಯುತ್ತದೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *