ಜೆಡಿಎಸ್, ಕಾಂಗ್ರೆಸ್ ಕಾರ್ಯಕರ್ತರ ಶ್ರಮದಿಂದ ಗೆಲುವು

ಹಾಸನ: ನನ್ನ ಗೆಲುವಿನಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಅಪಾರ ಶ್ರಮವಿದ್ದು, ಎಲ್ಲರಿಗೂ ಧನ್ಯವಾದ ಸಲ್ಲಿಸುತ್ತೇನೆ ಎಂದು ನೂತನ ಸಂಸದ ಪ್ರಜ್ವಲ್ ರೇವಣ್ಣ ಹೇಳಿದರು.


ಎಷ್ಟು ಮತಗಳ ಅಂತರದಿಂದ ಗೆಲ್ಲುತ್ತೇನೆಂದು ಲೆಕ್ಕಾಚಾರ ಹಾಕಿರಲಿಲ್ಲ. ಆದರೆ, ಗೆದ್ದೆ ಗೆಲ್ಲುತ್ತೇನೆಂಬ ಸಂಪೂರ್ಣ ವಿಶ್ವಾಸವಿತ್ತು. ಜಿಲ್ಲೆಯ ಜನರು ವಿಶ್ವಾಸವಿಟ್ಟು ನನಗೆ ಮತ ಹಾಕಿದ್ದು ಅವರ ಸಹಕಾರಕ್ಕೆ ಆಭಾರಿಯಾಗಿರುತ್ತೇನೆ ಎಂದು ಮತ ಎಣಿಕೆ ಕೇಂದ್ರದಲ್ಲಿ ಸುದ್ದಿಗಾರರಿಗೆ ಗುರುವಾರ ತಿಳಿಸಿದರು.


ಕ್ಷೇತ್ರದ ಎಂಟೂ ವಿಧಾನಸಭಾ ಕ್ಷೇತ್ರಗಳಲ್ಲಿ ವಿವಿಧ ಸಮಸ್ಯೆಗಳಿವೆ. ಎಲ್ಲದರ ಕುರಿತು ಸ್ಥಳೀಯ ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಸಲಹೆ ಪಡೆದು ಪರಿಹಾರ ಕ್ರಮ ಕೈಗೊಳ್ಳಲಾಗುವುದು. ಕೇಂದ್ರ ಸರ್ಕಾರದಿಂದ ಅನುದಾನ ತಂದು ಉತ್ತಮ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.


ಚುನಾವಣಾ ಪ್ರಚಾರ ವೇಳೆ ಪ್ರತಿಸ್ಪರ್ಧಿ ಕುರಿತು ಟೀಕೆ ಮಾಡಬಾರದೆಂದು ಹಿರಿಯರು ಹೇಳಿದ್ದರು. ನಾನು ಎಲ್ಲಿಯೂ ಯಾರ ಬಗ್ಗೆಯೂ ಹಗುರವಾಗಿ ಮಾತನಾಡಿಲ್ಲ. ಪ್ರಜಾಪ್ರಭುತ್ವದಲ್ಲಿ ಸೋಲು-ಗೆಲುವು ಸಾಮಾನ್ಯ ಎಂಬುದನ್ನು ಅರ್ಥ ಮಾಡಿಕೊಂಡಿದ್ದೆ. ಜಿಲ್ಲೆಯಲ್ಲಿ ಆಗಬೇಕಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತು ತಲೆಕೆಡಿಸಿಕೊಂಡಿದ್ದೆ. ಮತದಾರರಿಗೂ ಆ ನಿಟ್ಟಿನಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇನೆ. ಈ ಕಾರಣದಿಂದಲೇ ಜಯ ಗಳಿಸಿದ್ದೇನೆ ಎಂದರು.

Leave a Reply

Your email address will not be published. Required fields are marked *