More

    ಅಭಿವೃದ್ಧಿಯಲ್ಲಿ ಹಿಂದುಳಿದಿರುವ ಹಾಸನ ಜಿಲ್ಲೆ

    ಬೇಲೂರು: ಎರಡು ಕುಟುಂಬ 50 ವರ್ಷಗಳಿಂದ ಆಡಳಿತ ನಡೆಸಿದ ಪರಿಣಾಮ ಜಿಲ್ಲೆ ಅಭಿವೃದ್ಧಿಯಲ್ಲಿ ಹಿಂದುಳಿದಿದೆ ಎಂದು ಹಾಸನ ಲೋಕಸಭಾ ಕ್ಷೇತ್ರದ ಬಿಎಸ್‌ಪಿ ಅಭ್ಯರ್ಥಿ ಗಂಗಾಧರ್ ಬಹುಜನ್ ಹೇಳಿದರು.

    ಜಿಲ್ಲೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಕಣದಲ್ಲಿದ್ದಾರೆ. ಈ ಹಿಂದೆ ಕೋಮುವಾದಿಗಳೊಂದಿಗೆ ಕೈಜೋಡಿಸುವುದಿಲ್ಲ ಎಂದೇಳಿ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡು ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾದರು. ಆದರೆ ಇಂದು ಜೆಡಿಎಸ್ ತನ್ನ ಆಸ್ತಿತ್ವಕ್ಕಾಗಿ ಜಿಲ್ಲೆಯಲ್ಲಿ ಕೋಮುವಾದಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಜಿಲ್ಲೆಯ ಜನರಿಗೆ ಆಸೆ ತೋರಿಸಿ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಕಿಡಿಕಾರಿದರು.

    ಜಾತಿ ರಾಜಕೀಯ ಮಾಡುವ ಜೆಡಿಎಸ್ ಹಾಗೂ ಕೋಮುವಾದಿಗಳನ್ನು ಸೋಲಿಸಬೇಕು. ದೇಶದಲ್ಲಿ ಇಂಡಿಯಾ ಮತ್ತು ಎನ್‌ಡಿಎ ಅಧಿಕಾರಕ್ಕಾಗಿ ಹೋರಾಡುತ್ತಿವೆಯೇ ಹೊರತು ದೇಶದ ಅಭಿವೃದ್ಧಿಗಲ್ಲ ಎಂದರು.

    ಜಿಲ್ಲಾಧ್ಯಕ್ಷ ಹರೀಶ್ ಮಾತನಾಡಿ, ಚುನಾವಣೆಯಲ್ಲಿ ಹಣವೇ ಮಾನದಂಡವಲ್ಲ. ಬದಲಾಗಿ ವ್ಯಕ್ತಿ ಮುಖ್ಯ. ಹಣ ಸಂಪಾದನೆ ಮಾಡುವ ಉದ್ದೇಶದಿಂದ ರಾಜಕೀಯ ಮಾಡುತ್ತಿರುವ ಪಕ್ಷಗಳನ್ನು ಮಟ್ಟ ಹಾಕಬೇಕು. ಪ್ರಾದೇಶಿಕ ಪಕ್ಷಗಳನ್ನು ಮುಗಿಸಲು ರಾಷ್ಟ್ರೀಯ ಪಕ್ಷಗಳು ಹುನ್ನಾರ ಮಾಡುತ್ತಿದ್ದು, ಈ ವಿಚಾರ ಜೆಡಿಎಸ್‌ಗೆ ತಿಳಿಯದೆ ಹೊಂದಾಣಿಕೆ ಮಾಡಿಕೊಂಡಿದೆ ಎಂದರು.

    ಬಿಎಸ್‌ಪಿ ತಾಲೂಕು ಅಧ್ಯಕ್ಷ ಪ್ರಕಾಶ್, ಜಿಲ್ಲಾ ಚುನಾವಣೆ ಉಸ್ತುವಾರಿ ಲಕ್ಷ್ಮಣ್ ಕೀರ್ತಿ, ರಾಜ್ಯ ಮಹಿಳಾ ಪ್ರಧಾನ ಕಾರ್ಯದರ್ಶಿ ಶಿವಮ್ಮ, ಮುಖಂಡ ಮಲ್ಲೇಶ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts