20.3 C
Bangalore
Sunday, December 15, 2019

ಪ್ರತಿ ಎಕರೆ ಭೂಮಿಗೆ ರೂ.5ಲಕ್ಷ ಪರಿಹಾರ

Latest News

ಆರೋಗ್ಯದಲ್ಲಿ ಚೇತರಿಕೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಆಸ್ಪತ್ರೆಯಿಂದ ಬಿಡುಗಡೆ

ಬೆಂಗಳೂರು: ಅನಾರೋಗ್ಯ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಹಿಂದೆ ಆಸ್ಪತ್ರೆ ದಾಖಲಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇಂದು (ಭಾನುವಾರ) ಆಸ್ಪತ್ರೆಯಿಂದ ಬಿಡುಗೆಯಾಗಿ ಮನೆಗೆ ತೆರಳಲಿದ್ದಾರೆ.ಸ್ಟಂಟ್​ನಲ್ಲಿ...

ಜೆಡಿಎಸ್ ಜನ್ಮ ಜಾಲಾಟ, ವರಿಷ್ಠರಿಗೆ ಪೀಕಲಾಟ

ಬೆಂಗಳೂರು: ಸಾಲು ಸಾಲು ಸೋಲಿನಿಂದ ದಳಪತಿಗಳು ಕಂಗೆಟ್ಟಿದ್ದಾರೆ. ಲೋಕಸಭಾ ಚುನಾವಣೆ ಸೋಲಿ ನಿಂದ ಬೇಗುದಿ ಹೆಚ್ಚುತ್ತಿದ್ದು, ಮೈತ್ರಿ ಸರ್ಕಾರ ಪತನ, ಉಪಚುನಾವಣೆಯ ಹೀನಾಯ...

ಮೊದಲ ಟೆಸ್ಟ್​​ನಲ್ಲಿ ಆಸ್ಟ್ರೇಲಿಯಾಕ್ಕೆ ಬೃಹತ್ ಮುನ್ನಡೆ

ಪರ್ತ್: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬೃಹತ್ ಮುನ್ನಡೆ ಕಂಡಿರುವ ಆತಿಥೇಯ ಆಸ್ಟ್ರೇಲಿಯಾ ತಂಡ ಅಹರ್ನಿಶಿ ಟೆಸ್ಟ್ ಪಂದ್ಯಗಳಲ್ಲಿನ ತನ್ನ...

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ ಹಾವು: ವಿಡಿಯೋ ಬಗ್ಗೆ ಬಿಸಿಸಿಐ ಹೇಳಿದ್ದೇನು?

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ...

ವಿದೇಶಿ ಮಹಿಳೆಯಿಂದ ಪಿಂಡಪ್ರದಾನ

ಹೊಸಪೇಟೆ (ಬಳ್ಳಾರಿ): ದಕ್ಷಿಣ ಆಫ್ರಿಕಾದ ಮಹಿಳೆಯೊಬ್ಬರು ತಾಯಿಯ ಆತ್ಮಕ್ಕೆ ಶಾಂತಿ, ಸದ್ಗತಿ ದೊರೆಯಲೆಂದು ಶನಿವಾರ ಹಂಪಿ ನದಿ ತೀರದಲ್ಲಿ ಪುರೋಹಿತರ ನೇತೃತ್ವದಲ್ಲಿ ಹಿಂದು ಧಾರ್ವಿುಕ ವಿಧಿವಿಧಾನಗಳಂತೆ...

ಜಾವಗಲ್: ಬಯಲು ಸೀಮೆ ಜಿಲ್ಲೆಗೆ ಕುಡಿಯುವ ನೀರು ಒದಗಿಸುವ ಎತ್ತಿನಹೊಳೆ ಯೋಜನೆ ಕಾಮಗಾರಿಗೆ ಭೂಮಿ ನೀಡುವ ಭಾಗದ ರೈತರಿಗೆ ಪ್ರತಿ ಎಕರೆಗೆ 5 ಲಕ್ಷ ರೂ. ವರೆಗೆ ಪರಿಹಾರ ನೀಡಲಾಗುವುದು ಎಂದು ಸಕಲೇಶಪುರ ಉಪವಿಭಾಗಾಧಿಕಾರಿ ಗಿರೀಶ್ ನಂದನ್ ತಿಳಿಸಿದರು.

ಅರಸೀಕೆರೆ ತಾಲೂಕಿನ ಕಲ್ಯಾಡಿ ಗ್ರಾಮದಲ್ಲಿ ಬುಧವಾರ ಏರ್ಪಡಿಸಿದ್ದ ಎತ್ತಿನಹೊಳೆ ಪುನರ್ವಸತಿ ಸಭೆಯಲ್ಲಿ, ಶೇ.50ಕ್ಕಿಂತ ಹೆಚ್ಚು ಭೂಮಿ ಕಳೆದುಕೊಂಡ ರೈತರ ಹೆಸರು ಪ್ರಕಟಿಸಿ ಮಾತನಾಡಿದರು. ನಾಯಕನಕೆರೆ ಕಾವಲ್, ಕಲ್ಯಾಡಿ, ಹಳೇ ಕಲ್ಯಾಡಿ, ಕೆ.ಡಿಗ್ಗೇನಹಳ್ಳಿ, ವಡೇರಹಳ್ಳಿ ಕರಗುಂದ, ಬ್ಯಾಲದಕೆರೆ ಗ್ರಾಮದ ರೈತರು ಯೋಜನೆಗೆ ಭೂಮಿ ನೀಡಬೇಕಾಗುತ್ತದೆ ಎಂದರು.

ಎತ್ತಿನಹೊಳೆ ಯೋಜನೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸುರೇಂದ್ರಾಚಾರ್ ಮಾತನಾಡಿ, ಪಶ್ಚಿಮ ಘಟ್ಟದ ನೀರು ಸಮುದ್ರ ಪಾಲಾಗುತ್ತಿರುವುದನ್ನು ತಪ್ಪಿಸಿ 7 ಜಿಲ್ಲೆಯ 27 ತಾಲೂಕು ಜನರಿಗೆ ಕಲ್ಪಿಸುವ ಉದ್ದೇಶದಿಂದ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಶೇ.50ಕ್ಕಿಂತ ಹೆಚ್ಚು ಭೂಮಿ ಕಳೆದುಕೊಂಡ ರೈತರಿಗೆ ಪುನರ್ ವಸತಿ ಕಲ್ಪಿಸಬೇಕಾಗಿರುವುದರಿಂದ ಈಗಾಗಲೆ ಕೆಲವು ಹಳ್ಳಿಗಳ ರೈತರ ಪಟ್ಟಿ ಸಿದ್ಧಪಡಿಸಲಾಗಿದೆ ಎಂದರು.

ಎಂ.ಕೊಪ್ಪಲು ಗ್ರಾಮದ ಸತೀಶ್ ಮಾತನಾಡಿ, ಭೂಮಿ ಕಳೆದುಕೊಳ್ಳುವ ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ. ಸಕಲೇಶಪುರ ತಾಲೂಕಿನ ಭೂಮಿಗೆ ನೀಡುತ್ತಿರುವ ಪರಿಹಾರವನ್ನು ಅರಸೀಕೆರೆ ತಾಲೂಕಿಗೂ ಅನುಸರಿಸಬೇಕು ಎಂದು ಆಗ್ರಹಿಸಿದರು.

ರೈತ ಸಂಘದ ತಾಲೂಕು ಅಧ್ಯಕ್ಷ ಕನಕಂಚೇನಹಳ್ಳಿ ಪ್ರಸನ್ನ ಕುಮಾರ್ ಮಾತನಾಡಿ, ಬೇರೆ ಜಿಲ್ಲೆಯ ಜನರ ಒಳಿತಿಗಾಗಿ ಭೂಮಿ ನೀಡುತ್ತಿರುವ ನಮಗೆ ನೀರಿಲ್ಲದಾಗಿದೆ. ಈ ಭಾಗದ ದೇವಿಗೆರೆ, ಕಲ್ಯಾಡಿ, ಕರಗುಂದ, ನಾಯ್ಕನ ಕೆರೆಗಳಿಗೆ ನೀರು ಹರಿಸಬೇಕು ಎಂದರು.

ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ ಸಭೆಗೆ ಚಾಲನೆ ನೀಡಿದರು. ಎತ್ತಿನಹೊಳೆ ಕಾರ್ಯಪಾಲಕ ಇಂಜಿನಿಯರ್ ಕೆ.ಎಂ.ಕೆ.ಶರ್ಮಾ, ಜಿಪಂ ಅಧ್ಯಕ್ಷೆ ಶ್ವೇತಾ ದೇವರಾಜ್, ತಹಸೀಲ್ದಾರ್ ಎಂ.ಜಿ.ಸಂತೋಷಕುಮಾರ್, ಎಪಿಎಂಸಿ ನಿರ್ದೇಶಕ ದೇಶಾಣಿ ರಾಜು, ಗ್ರಾಪಂ ಅಧ್ಯಕ್ಷೆ ಗೌರಮ್ಮ ಇತರರಿದ್ದರು.

 

Stay connected

278,754FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...