ಹಾಸನ ಶಾಸಕ ಪ್ರೀತಂ ಗೌಡಗೆ ಕರೊನಾ

ಹಾಸನ : ಹಾಸನ ಕ್ಷೇತ್ರದ ಬಿಜೆಪಿ ಶಾಸಕ ಪ್ರೀತಂ ಜೆ.ಗೌಡ ಅವರಿಗೆ ಕರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿ ನೀಡಿರುವ ಗೌಡ, “ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಮುಂಜಾಗ್ರತಾ ಕ್ರಮವಾಗಿ ಐಸೋಲೇಶನ್​​ಗೆ ಒಳಗಾಗಿದ್ದೇನೆ” ಎಂದು ಟ್ವೀಟ್ ಮಾಡಿದ್ದಾರೆ. ಜೊತೆಗೆ, “ನನ್ನ ಜೊತೆ ಸಂಪರ್ಕದಲ್ಲಿದ್ದ ಎಲ್ಲರೂ ಆದಷ್ಟು ಬೇಗ ಕೋವಿಡ್ ಪರೀಕ್ಷೆ ಮಾಡಿಸಿ, ಆರೋಗ್ಯದ ಕಡೆ ಗಮನ ಹರಿಸಿ, ತಾಯಿ ಹಾಸನಾಂಬೆಯ ಆಶೀರ್ವಾದ ಮತ್ತು ನಿಮ್ಮೆಲ್ಲರ ಹಾರೈಕೆಗಳಿಂದ ಬೇಗ ಗುಣಮುಖನಾಗುತ್ತೇನೆ” ಎಂದಿದ್ದಾರೆ. … Continue reading ಹಾಸನ ಶಾಸಕ ಪ್ರೀತಂ ಗೌಡಗೆ ಕರೊನಾ