More

    ನೆರೆ, ಬರ ಪರಿಹಾರ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ

    ಹಾಸನ: ನೆರೆ ಹಾಗೂ ಬರ ಪರಿಹಾರ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಬೇಕೆಂದು ರಾಜ್ಯ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಸೂಚಿಸಿದರು.
    ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ಗುರುವಾರ ವಿಡಿಯೋ ಸಂವಾದ ನಡೆಸಿ ಮಾತನಾಡಿದರು.


    ನೆರೆ ಹಾವಳಿಯಿಂದ ಹಾನಿಗೊಳಗಾದ ಸಂತ್ರಸ್ತರ ಮನೆಗಳ ನಿರ್ಮಾಣ ಪ್ರಗತಿಯ ವಿವರ ತಿಳಿಯಲು ಈಗಾಗಲೇ ನಡೆಯುತ್ತಿರುವ ಕಾಮಗಾರಿ ಫೋಟೋ ಅಪ್‌ಲೋಡ್ ಮಾಡಬೇಕೆಂದರು.


    ಲೋಕೋಪಯೋಗಿ, ಸಣ್ಣ ನೀರಾವರಿ, ಪಂಚಾಯತ್‌ರಾಜ್, ಕಂದಾಯ ಇಲಾಖೆಗಳಿಗೆ ಸಂಬಂಧಿಸಿದ ಕಾಮಗಾರಿಗಳನ್ನು ಫೆ.10ರೊಳಗೆ ಪ್ರಾರಂಭಿಸಬೇಕು. ಹಾಸನ ಜಿಲ್ಲೆಯಲ್ಲಿ ಬಾಕಿ ಇರುವ 195 ಕಾಮಗಾರಿಗಳು ತ್ವರಿತವಾಗಿ ಮುಕ್ತಾಯಗೊಳಿಸಬೇಕು ಎಂದರು.


    ಜಿಲ್ಲಾಧಿಕಾರಿ ಆರ್.ಗಿರೀಶ್ ಮಾತನಾಡಿ, ಜಿಲ್ಲೆಯಲ್ಲಿ 640 ಮನೆಗಳ ಕಾಮಗಾರಿ ವಿವಿಧ ಹಂತದಲ್ಲಿ ಪ್ರಗತಿಯಲ್ಲಿದ್ದು, ಜಿಲ್ಲೆಗೆ ನೀಡಿದ 27 ಕೋಟಿ ರೂ.ಗಳಲ್ಲಿ 1,938 ಕೆಲಸ ಆರಂಭಿಸಲಾಗಿದೆ. ಪ್ರವಾಹದಿಂದ 25,542 ರೈತರ ಬೆಳೆ ಹಾನಿಗೊಳಗಾಗಿದ್ದು, 40 ಕೋಟಿ ರೂ.ಪರಿಹಾರ ವಿತರಿಸಲಾಗಿದೆ ಎಂದರು.
    ಜಿಪಂ ಸಿಇಒ ಬಿ.ಎ. ಪರಮೇಶ್ ಮಾತನಾಡಿ, ಫೆ.13ಕ್ಕೆ ಕಾಮಗಾರಿಗಳ ಟೆಂಡರ್ ಆಗಲಿದ್ದು, ಮಾರ್ಚ್ ಒಳಗೆ ಕೆಲಸ ಪ್ರಾರಂಭಿಸಲಾಗುವುದು ಎಂದು ವಿವರ ಒದಗಿಸಿದರು.


    ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ, ಪಂಚಾಯತ್‌ರಾಜ್ ಇಂಜಿನಿಯರಿಂಗ್ ವಿಭಾಗ ಇಂಜಿನಿಯರ್ ಆನಂದ್‌ಕುಮಾರ್, ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಮಂಜು ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts