More

    ಸಮುದಾಯ ಅಭಿವೃದ್ಧಿಗೆ 50 ಕೋಟಿ ರೂ. ಮೀಸಲಿಡಲು ಆಗ್ರಹ

    ಹಾಸನ: ಕೊರಮ-ಕೊರಚ ಅಭಿವೃದ್ಧಿ ನಿಗಮಕ್ಕೆ 50 ಕೋಟಿ ರೂ. ಮೀಸಲಿಡಬೇಕು ಎಂದು ಅಖಿಲ ಕರ್ನಾಟಕ ಕುಳುವ ಮಹಾಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ.ಎ. ರಂಗಸ್ವಾಮಿ ಆಗ್ರಹಿಸಿದರು.

    2013ರಲ್ಲಿ ಮುಖ್ಯಮಂತ್ರಿಯಾಗಿದ್ದ ಜಗದೀಶ್ ಶೆಟ್ಟರ್ ನಿಗಮ ಸ್ಥಾಪಿಸಿ 5 ಕೋಟಿ ರೂ. ಅನುದಾನ ಘೋಷಿಸಿದ್ದರು. ಆದರೆ ಆ ನಿಟ್ಟಿನಲ್ಲಿ ಇಲ್ಲಿವರೆಗೆ ಯಾವುದೇ ಪ್ರಗತಿಯಾಗಿಲ್ಲ. ಸಾಮಾಜಿಕ ನ್ಯಾಯದಡಿ 50 ಕೋಟಿ ರೂ. ನೀಡಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಶನಿವಾರ ಒತ್ತಾಯಿಸಿದರು.

    ರಾಜ್ಯಾದ್ಯಂತ 15 ಲಕ್ಷ ಜನಸಂಖ್ಯೆ ಇರುವ ಕೊರಮ ಕೊರಚ ಸಮುದಾಯ ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದಿದೆ. ಜೀವನೋಪಾಯಕ್ಕಾಗಿ ಹಂದಿ ಸಾಕಾಣಿಕೆ, ಬುಟ್ಟಿ ನೇಯುವುದು, ಹಗ್ಗ ನೇಯುವುದು, ಈಚಲು ಗರಿಗಳಿಂದ ಪೊರಕೆ ಕಟ್ಟುವುದು ಹೀಗೆ ಇತರ ವೃತ್ತಿ ಮೂಲಕ ಬದುಕು ಕಟ್ಟಿಕೊಂಡಿದ್ದಾರೆ. ಮೂಲ ಸೌಕರ್ಯಕ್ಕಾಗಿ ನಡೆಸಿದ ನಿರಂತರ ಹೋರಾಟಕ್ಕೆ ಬೆಲೆ ಇಲ್ಲದಾಗಿದೆ. ಡಿಸಿಎಂ ಗೋವಿಂದ ಕಾರಜೋಳ ಅವರು ಕೊರಮ-ಕೊರಚ ಅಭಿವೃದ್ಧಿ ಸ್ಥಾಪನೆ ಅವಶ್ಯಕತೆ ಇಲ್ಲವೆಂಬ ಆಘಾತಕಾರಿ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಇಲ್ಲವಾದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

    ಜಿಲ್ಲಾ ಸಂಘಟನಾ ಕಾರ್ಯದರ್ಶಿ ಜಿ.ಎಸ್. ಯೋಗಿಶ್, ಜಿಲ್ಲಾಧ್ಯಕ್ಷ ಬಿ.ಆರ್. ಲೋಕೇಶ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts