More

    ದೇಶ ದ್ರೋಹಿಗಳು ರೈತರಾಗಲು ಹೇಗೆ ಸಾಧ್ಯ ? ಶೋಭಾ ಕರಂದ್ಲಾಜೆ ಪ್ರಶ್ನೆ

    ಹಾಸನ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರತಿಭಟಿಸಲು ಯಾವುದೇ ವಿಷಯವಿಲ್ಲವಾದ್ದರಿಂದ ವಿರೋಧ ಪಕ್ಷಗಳು ರೈತರನ್ನು ಎತ್ತಿ ಕಟ್ಟುತ್ತಿವೆ, ಕಾಂಗ್ರೆಸ್‌ನ ಇಬ್ಬಂದಿ ನೀತಿ ಇದಾಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದರು.

    ನಗರದ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಏರ್ಪಡಿಸಿದ್ದ ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಜನ್ಮ ದಿನಾಚರಣೆ ಹಾಗೂ ರೈತರೊಂದಿಗೆ ಸಂವಾದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

    ನಗರ ನಕ್ಸಲರು, ದೇಶ ವಿರೋಧಿ ಘೋಷಣೆ ಕೂಗುವವರೆಲ್ಲ ರೈತರ ಹೆಸರಿನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಸಿಎಎ ವಿರೋಧಿ ಹೋರಾಟದಲ್ಲಿ ಪಾಲ್ಗೊಂಡಿದ್ದ, ಜೆಎನ್‌ಯುನಲ್ಲಿ ದೇಶ ವಿರೋಧಿ ಹೇಳಿಕೆ ನೀಡಿದ ಉಮರ್ ಖಲೀದ ಪ್ರತಿಭಟನೆಯಲ್ಲಿದ್ದಾರೆ. ರಾಷ್ಟ್ರ ದ್ರೋಹ ಕೆಲಸದಲ್ಲಿ ತೊಡಗುವ ಇವರಿಗೂ ಮತ್ತು ಶ್ರಮವಹಿಸಿ ದುಡಿಯುವ ರೈತರೊಂದಿಗೆ ಹೋಲಿಕೆ ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

    ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾಯ್ದೆಯಿಂದ ರೈತರಿಗೆ ಯಾವುದೇ ಸಮಸ್ಯೆಯಿಲ್ಲ. ಕಳೆದ 25 ವರ್ಷಗಳಿಂದ ಕೃಷಿ ಕಾಯ್ದೆ ಕುರಿತು ಚರ್ಚೆಯಾಗುತ್ತಲೇ ಇತ್ತು. ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗದೆ ರೈತರು ತೊಂದರೆ ಅನುಭವಿಸುತ್ತಿದ್ದರೂ ಕಾಯ್ದೆಯಲ್ಲಿ ಬದಲಾವಣೆ ಮಾಡುವ ನಿರ್ಧಾರವನ್ನು ಯಾವ ಸರ್ಕಾರ ಕೈಗೊಂಡಿರಲಿಲ್ಲ. ಕಾಂಗ್ರೆಸ್ ಸಹ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಎಪಿಎಂಸಿ ರದ್ದುಗೊಳಿಸುವುದಾಗಿ ಹೇಳಿತ್ತು. ಅಂದು ಕಾಯ್ದೆ ತಿದ್ದುಪಡಿಗೆ ಮುಂದಾಗಿದ್ದವರೆಲ್ಲ ಇವತ್ತು ವಿರೋಧಿಸುತ್ತಿದ್ದಾರೆ. ರಾಜಕೀಯ ಅಸ್ತಿತ್ವಕ್ಕಾಗಿ ನಡೆಯುತ್ತಿರುವ ಈ ಹೋರಾಟ ಯಶಸ್ಸು ಕಾಣುವುದಿಲ್ಲ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts