More

    ಪರೀಕ್ಷೆ ಕೊಠಡಿ ಸ್ಯಾನಿಟೈಸ್ ಮಾಡಿ

    ಹಾಸನ: ಜೂ.18 ರಂದು ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ನಡೆಯುವ ಕೊಠಡಿಗಳನ್ನು ಸ್ಥಳೀಯ ಆಡಳಿತದ ನೆರವಿನಿಂದ ಕಡ್ಡಾಯವಾಗಿ ಸ್ಯಾನಿಟೈಸ್ ಮಾಡಬೇಕು ಎಂದು ನೀಡಿದರು.
    ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ಪರೀಕ್ಷಾ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದರು.
    ಯಾವುದೇ ಗೊಂದಲವಿಲ್ಲದೆ ಪರೀಕ್ಷೆ ಸುಸೂತ್ರವಾಗಿ ನಡೆಯಬೇಕು. ಕೋವಿಡ್-19 ನಿಯಂತ್ರಣಾ ಕ್ರಮಗಳ ಬಗ್ಗೆ ಮುಂಜಾಗ್ರತೆ ವಹಿಸಿ ಪರಸ್ಪರ ಅಂತರ ಕಾಯ್ದುಕೊಂಡು ಮಕ್ಕಳು ಪರೀಕ್ಷೆ ಬರೆಯಬೇಕು. ವಿದ್ಯಾರ್ಥಿಗಳಿಗೆ ಪರೀಕ್ಷೆಯ ದಿನ ಯಾವುದೇ ರೀತಿಯ ಸಾರಿಗೆ ಸಮಸ್ಯೆಯಾಗಬಾರದು. ಹಾಗಾಗಿ ಆ ದಿನ ಸಾರ್ವಜನಿಕ ಬಸ್ ಸಂಚಾರ ಸಂಪೂರ್ಣವಾಗಿರಲಿ ಎಂದು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.
    ಪರೀಕ್ಷೆಗೂ ಮುನ್ನ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದರ ಜತೆಗೆ ಶೀತ, ಜ್ವರ ಹಾಗೂ ಇತರ ರೋಗ ಲಕ್ಷಣಗಳಿದ್ದರೆ ಅಂಥ ವಿದ್ಯಾರ್ಥಿಗಳನ್ನು ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯುವ ವ್ಯವಸ್ಥೆ ಆಗಬೇಕು ಎಂದರು.
    ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಯಣ್ಣ ಮಾತನಾಡಿ, ಒಟ್ಟು 30 ಪರೀಕ್ಷಾ ಕೇಂದ್ರಗಳಿದ್ದು, ಹೆಚ್ಚುವರಿಯಾಗಿ 15 ಬ್ಲಾಕ್ ಸಿದ್ಧಪಡಿಸಿಕೊಳ್ಳಲಾಗಿದೆ. ವಿದ್ಯಾರ್ಥಿಯಲ್ಲಿ ರೋಗ ಲಕ್ಷಣ ಕಂಡುಬಂದಲ್ಲಿ ಅಂಥವರನ್ನು ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಸುವುದರ ಜತೆಗೆ ಸ್ಥಳೀಯ ವೈದ್ಯಾಧಿಕಾರಿಗಳಿಗೆ ಮಾಹಿತಿ ನೀಡಲಾಗುವುದು ಎಂದು ಹೇಳಿದರು.
    ಪ್ರಶ್ನೆ ಪತ್ರಿಕೆಗಳನ್ನು ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಕೊಂಡೊಯ್ಯಲು ವಾಹನ ವ್ಯವಸ್ಥೆ ಹಾಗೂ ಪೊಲೀಸ್ ಸಿಬ್ಬಂದಿ ವ್ಯವಸ್ಥೆ ಕಲ್ಪಿಸಬೇಕೆಂದು ಕೋರಿದರು.
    ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಮ್ ಮಾತನಾಡಿ, ನಿರ್ಬಂಧಿತ ವಲಯಗಳಿಂದ ಬರುವ ವಿದ್ಯಾರ್ಥಿಗಳಿದ್ದರೆ, ಅವರ ಮಾಹಿತಿ ಪಡೆದು ಪರೀಕ್ಷೆಗೆ ಹಾಜರಾಗಲು ಸೂಕ್ತ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
    ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್. ನಂದಿನಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ. ಸತೀಶ್‌ಕುಮಾರ್, ಉಪವಿಭಾಗಾಧಿಕಾರಿ ಗಿರೀಶ್ ನಂದನ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಿ.ಎ. ಜಗದೀಶ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts