ರೇವ್ ಪಾರ್ಟಿ ಮೇಲೆ ದಾಳಿ: ನೂರಕ್ಕೂ ಹೆಚ್ಚು ಯುವಕ-ಯುವತಿಯರನ್ನು ವಶಕ್ಕೆ ಪಡೆದ ಹಾಸನ ಪೊಲೀಸರು!

Rave Party 1
Published on

ಹಾಸನ: ಆಲೂರು ತಾಲೂಕಿನ ಹೊಂಕರವಳ್ಳಿ ಸಮೀಪದ ನಂದೀಶ್ವರ ಎಸ್ಟೇಟ್ ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸ್ ಗೌಡ ಶನಿವಾರ ರಾತ್ರಿ ದಾಳಿ ನಡೆಸಿ ನೂರಕ್ಕೂ ಹೆಚ್ಚು ಯುವಕ, ಯುವತಿಯರನ್ನು ವಶಕ್ಕೆ ಪಡೆದಿದ್ದಾರೆ.

ಸುಮಾರು ನೂರು ಐಷಾರಾಮಿ ಕಾರು, ಬೈಕ್​ಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರಿನಿಂದ ಬಂದು ಪಾರ್ಟಿಯಲ್ಲಿ ತೊಡಗಿದ್ದವರಿಂದ ಮಾದಕ ವಸ್ತುಗಳ ಬಳಕೆ ಮಾಹಿತಿ ಆಧರಿಸಿ ತಡ ರಾತ್ರಿ ರೇಡ್ ನಡೆಸಲಾಗಿದೆ.

ವಶಕ್ಕೆ ಪಡೆದವರನ್ನು ಆಲೂರಿನ ವೀರಶೈವ ಕಲ್ಯಾಣ ಮಂಟಪದಲ್ಲಿರಿಸಿ ವಿಚಾರಣೆ ನಡೆಸಲಾಗುತ್ತಿದೆ. ಗಾಂಜಾ ಮುಂತಾದ ಮಾದಕ ವಸ್ತುಗಳು ದೊರಕಿದ್ದು, ಕಾರ್ಯಕ್ರಮ ಆಯೋಜಕರ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net