ಹಾಸನಾಂಬೆ ದೇಗುಲದ ಗರ್ಭಗುಡಿ ಬಾಗಿಲು ಬಂದ್​: ಮುಂದಿನ ವರ್ಷವೇ ದೇವಿಯ ದರ್ಶನ ಸಿಗೋದು

hasanambe
Published on

ಹಾಸನ: ನಗರದ ಅಧಿದೇವತೆ ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲನ್ನು ಇಂದು(ಗುರುವಾರ) ಮಧ್ಯಾಹ್ನ 12.47ಕ್ಕೆ ಶಾಸ್ತ್ರೋಕ್ತವಾಗಿ ಮುಚ್ಚಲಾಯಿತು.

ವರ್ಷದ ಬಳಿಕ ಅಂದರೆ ಅ.13ರಂದು ದೇವಸ್ಥಾನದ ಗರ್ಭಗುಡಿ ಬಾಗಿಲನ್ನು ತೆರೆಯಲಾಗಿತ್ತು. ಲಕ್ಷಾಂತರ ಭಕ್ತರು ಹಾಸನಾಂಬೆಯ ವಿಶ್ವರೂಪ ದರ್ಶನ ಪಡೆದಿದ್ದರು. ಸಂಪ್ರದಾಯದಂತೆ ಇಂದು ಗರ್ಭಗುಡಿಯ ಬಾಗಿಲು ಮುಚ್ಚಲಾಗಿದ್ದು, ಮುಂದಿನ ವರ್ಷ ಅಂದರೆ 2023ರ ನವೆಂಬರ್​ 2ರಿಂದ ನವೆಂಬರ್​ 15ರ ವರೆಗೆ ಹಾಸನಾಂಬೆ ಜಾತ್ರಾ ಮಹೋತ್ಸವ ನಡೆಯಲಿದೆ. ಆಗ ಮತ್ತೆ ಗರ್ಭಗುಡಿಯ ಬಾಗಿಲನ್ನು ತೆರೆಯಲಾಗುತ್ತೆ. ವರ್ಷಕ್ಕೊಮ್ಮೆ ಮಾತ್ರ ಹಾಸನಾಂಬೆ ದೇವಿ ದರ್ಶನ ಕರುಣಿಸಲಿದ್ದಾಳೆ.

ಕೊನೆಯ ದಿನ ಸಾರ್ವಜನಿಕರಿಗೆ ದೇವರ ದರ್ಶನಕ್ಕೆ ವ್ಯವಸ್ಥೆ ಇರಲಿಲ್ಲ. ಆದರೂ ನೂರಾರು ಭಕ್ತರು ಆಗಮಿಸಿದ್ದರು. ಅವರಿಗೆ ದೇವಿ ದರ್ಶನ ಪಡೆಯಲು ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತ ಅವಕಾಶ ಕಲ್ಪಿಸಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಸಚಿವ ಎಸ್.ಟಿ.ಸೋಮಶೇಖರ್, ಶಾಸಕರಾದ ಪ್ರೀತಂಗೌಡ, ಸಿ.ಎನ್.ಬಾಲಕೃಷ್ಣ, ಹಾಗೂ ಜಿಲ್ಲಾಧಿಕಾರಿ ಅರ್ಚನಾ, ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಉಪಸ್ಥಿತರಿದ್ದರು.(ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net