ಹಾಸನಾಂಬೆ ದೇಗುಲದ ಗರ್ಭಗುಡಿ ಬಾಗಿಲು ಬಂದ್​: ಮುಂದಿನ ವರ್ಷವೇ ದೇವಿಯ ದರ್ಶನ ಸಿಗೋದು

ಹಾಸನ: ನಗರದ ಅಧಿದೇವತೆ ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲನ್ನು ಇಂದು(ಗುರುವಾರ) ಮಧ್ಯಾಹ್ನ 12.47ಕ್ಕೆ ಶಾಸ್ತ್ರೋಕ್ತವಾಗಿ ಮುಚ್ಚಲಾಯಿತು. ವರ್ಷದ ಬಳಿಕ ಅಂದರೆ ಅ.13ರಂದು ದೇವಸ್ಥಾನದ ಗರ್ಭಗುಡಿ ಬಾಗಿಲನ್ನು ತೆರೆಯಲಾಗಿತ್ತು. ಲಕ್ಷಾಂತರ ಭಕ್ತರು ಹಾಸನಾಂಬೆಯ ವಿಶ್ವರೂಪ ದರ್ಶನ ಪಡೆದಿದ್ದರು. ಸಂಪ್ರದಾಯದಂತೆ ಇಂದು ಗರ್ಭಗುಡಿಯ ಬಾಗಿಲು ಮುಚ್ಚಲಾಗಿದ್ದು, ಮುಂದಿನ ವರ್ಷ ಅಂದರೆ 2023ರ ನವೆಂಬರ್​ 2ರಿಂದ ನವೆಂಬರ್​ 15ರ ವರೆಗೆ ಹಾಸನಾಂಬೆ ಜಾತ್ರಾ ಮಹೋತ್ಸವ ನಡೆಯಲಿದೆ. ಆಗ ಮತ್ತೆ ಗರ್ಭಗುಡಿಯ ಬಾಗಿಲನ್ನು ತೆರೆಯಲಾಗುತ್ತೆ. ವರ್ಷಕ್ಕೊಮ್ಮೆ ಮಾತ್ರ ಹಾಸನಾಂಬೆ ದೇವಿ ದರ್ಶನ ಕರುಣಿಸಲಿದ್ದಾಳೆ. … Continue reading ಹಾಸನಾಂಬೆ ದೇಗುಲದ ಗರ್ಭಗುಡಿ ಬಾಗಿಲು ಬಂದ್​: ಮುಂದಿನ ವರ್ಷವೇ ದೇವಿಯ ದರ್ಶನ ಸಿಗೋದು