More

    ಚಿನ್ನದನಾಡಲ್ಲಿ ಆಂಗ್ಲ ನಾಮಫಲಕ

    ಹಟ್ಟಿಚಿನ್ನದಗಣಿ: ಹಟ್ಟಿಚಿನ್ನದಗಣಿ ಕಂಪನಿಯ ಅಧಿಸೂಚಿತ ಪ್ರದೇಶ ಸಮಿತಿ ಹಾಗೂ ಹಟ್ಟಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಪೂರ್ಣ ಇಂಗ್ಲಿಷ್ ಸೇರಿ ಅನ್ಯ ಭಾಷೆಗಳ ನಾಮಫಲಕಗಳು ರಾರಾಜಿಸುತ್ತಿದ್ದರೂ ಕ್ರಮವಿಲ್ಲದಂತಾಗಿದೆ.

    ನಾಮಫಲಕದಲ್ಲಿ ಶೇ.60 ಕನ್ನಡ ಭಾಷೆಯನ್ನೇ ಬಳಸಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿ ವಾರಗಳೇ ಕಳೆದಿದ್ದರೂ ಸ್ಥಳೀಯ ಆಡಳಿತ ಯಾವುದೇ ಕ್ರಮಕೈಗೊಂಡಿರಲಿಲ್ಲ. ಸರ್ಕಾರ ಆದೇಶದಂತೆ ಅನ್ಯಬಾಷೆಗಳ ನಾಮಫಲಕಗಳನ್ನು ತೆರವುಗೊಳಿಸಲು ಯಾವ ಕ್ರಮಕೈಗೊಂಡಿದ್ದೀರಿ ಎಂದು ಸಂಘಟನೆಯವರು, ಮಾಧ್ಯಮದವರು ಪ್ರಶ್ನಿಸುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು ಶುಕ್ರವಾರ ತರಾತುರಿಯಲ್ಲಿ ಅಂಗಡಿ ಮುಂಗಟ್ಟುಗಳಿಗೆ ಭೇಟಿ ನೀಡಿ ನೋಟಿಸ್ ನೀಡಿದ್ದಾರೆ.

    ಕನ್ನಡ ನಾಮಫಲಕಗಳನ್ನು ಕಡ್ಡಾಯಗೊಳಿಸಬೇಕು. ಇಲ್ಲವಾದರೆ ಪಪಂಗೆ ಬೀಗ ಹಾಕುವ ಜತೆಗೆ ನಾಮಫಲಕಗಳಿಗೆ ಕಪ್ಪುಬಣ್ಣ ಬಳಿದು ಪ್ರತಿಭಟಿಸಲಾಗುವುದು ಎಂದು ಕ.ರ.ವೇ(ಪ್ರವೀಣ ಶೆಟ್ಟಿ ಬಣ) ಹಟ್ಟಿ ನಗರ ಘಟಕದ ಅಧ್ಯಕ್ಷ ಮೌನೇಶ್ ಕಾಕಾನಗರ ಎಚ್ಚರಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts