More

    ಅತ್ಯಾಚಾರಿಗಳಿಗೆ ಪುರುಷತ್ವ ಹರಣ ಶಿಕ್ಷೆ ವಿಧಿಸಿ… ಎಂದ ಮಾಜಿ ಡಿವೈಎಸ್ಪಿ

    ಬಳ್ಳಾರಿ: ಉತ್ತರ ಪ್ರದೇಶದ ಹಾಥರಸ್​ನಲ್ಲಿ ಯುವತಿಯೊಬ್ಬಳ ಮೇಲೆ ನಡೆದಿದೆ ಎನ್ನಲಾದ ಗ್ಯಾಂಗ್​ ರೇಪ್​ ಪ್ರಕರಣ ಸಂಬಂಧ ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.

    ಭಾರತೀಯ ಜನಶಕ್ತಿ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಅನುಪಮಾ ಶೆಣೈ ಶುಕ್ರವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅತ್ಯಾಚಾರಿಗಳಿಗೆ ಪುರುಷತ್ವ ಹರಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು. ಹಾಥರಸ್ ಪ್ರಕರಣವನ್ನು ರಾಜಕೀಯಗೊಳಿಸದೆ ಸಂತ್ರಸ್ತೆ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು. ಅತ್ಯಾಚಾರಕ್ಕೊಳಗಾದ ಮಹಿಳೆಯ ಶವವನ್ನು ಕುಟುಂಬಕ್ಕೆ ನೀಡದೆ ಪೊಲೀಸರೇ ಸುಟ್ಟು ಹಾಕಿದ್ದು ತಪ್ಪು ಎಂದು ಆಕ್ರೋಶ ಹೊರಹಾಕಿದ ಅನುಪಮಾ, ದೇಶದ ನ್ಯಾಯ ವ್ಯವಸ್ಥೆಯು ನಿರಪರಾಧಿಗಳಿಗೆ ಶಿಕ್ಷೆ ಆಗಬಾರದು ಎಂಬ ಉದ್ದೇಶ ಹೊಂದಿದೆ. ಇದರಿಂದಾಗಿಯೇ ಅಪರಾಧಿಗಳ ಸಂಖ್ಯೆ ಹೆಚ್ಚಿದೆ ಎಂದರು. ಇದನ್ನೂ ಓದಿರಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಅರ್ಚಕನಿಗೆ 14 ವರ್ಷ ಜೈಲು

    ಸಾಕ್ಷ್ಯನಾಶ ಮಾಡಿದ ಪೊಲೀಸರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ಹಾಥರಸ್​ ಪ್ರಕರಣದಲ್ಲಿ ಬಿಜೆಪಿ ಹಸ್ತಕ್ಷೇಪ ಮಾಡದೆ ನ್ಯಾಯಯುತ ತನಿಖೆಗೆ ಅವಕಾಶ ನೀಡಬೇಕೆಂದು ಅನುಪಮಾ ಒತ್ತಾಯಿಸಿದರು.

    ನಮ್ಮ ಪಕ್ಷದ ಬಲವರ್ಧನೆಗೆ ಮುಂದಾಗುತ್ತೇವೆ. ನಾನು ಭ್ರಷ್ಟಾಚಾರ ವಿರೋಧಿಸಿ ಇಲಾಖೆಯಿಂದ ಹೊರ ಬಂದಿರುವೆ. ಬಳ್ಳಾರಿ, ಬೀದರ್, ಬೆಳಗಾವಿ, ಚಿಕ್ಕೋಡಿ, ಬೆಂಗಳೂರಲ್ಲಿ ನಮ್ಮ ಪಕ್ಷದ ಪದಾಧಿಕಾರಿಗಳಿದ್ದಾರೆ. ಬಸವಕಲ್ಯಾಣದ ಉಪ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಯೋಚನೆ ಇದೆ ಎಂದು ಅನುಪಮಾ ಶೆಣೈ ತಿಳಿಸಿದರು.

    ಪತ್ನಿಯ ಗುಪ್ತಾಂಗಕ್ಕೆ ಪೆಟ್ರೋಲ್​ ಸುರಿದು ಬೆಂಕಿಯಿಟ್ಟು ವಿಕೃತಿ ಮೆರೆದ ಗಂಡ-ಅತ್ತೆ!

    ವಾಮಾಚಾರ ನೆಪದಲ್ಲಿ ವಿಧವೆ ಬಳಿ 8.12 ಕೋಟಿ ಹಣ ಪೀಕಿದ, ಖಾಸಗಿ ವಿಡಿಯೋ ಇಟ್ಟುಕೊಂಡು ಹಿಂಸಿಸಿದ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts