More

    ಕೇಂದ್ರ ಸರ್ಕಾರದಿಂದ ದ್ವೇಷದ ರಾಜಕೀಯ

    ಹಾನಗಲ್ಲ: ರಾಹುಲ್‌ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸುವ ಮೂಲಕ ಕೇಂದ್ರದ ಬಿಜೆಪಿ ಸರ್ಕಾರ ದ್ವೇಷದ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿ ಪಟ್ಟಣದ ತಾಪಂ ಕಚೇರಿ ಎದುರಿನ ಅಂಬೇಡ್ಕರ್ ಪ್ರತಿಮೆ ಬಳಿ ಕಾಂಗ್ರೆಸ್ ಪಕ್ಷದಿಂದ ಬುಧವಾರ ಮೌನ ಪ್ರತಿಭಟನೆ ನಡೆಸಲಾಯಿತು.

    ಕೆಪಿಸಿಸಿ ಸದಸ್ಯ ಟಾಕನಗೌಡ ಪಾಟೀಲ ಮಾತನಾಡಿ, ಕೇಂದ್ರದ ಬಿಜೆಪಿ ಸರ್ಕಾರ ದ್ವೇಷದ ರಾಜಕಾರಣದಲ್ಲಿ ತೊಡಗಿದೆ. ವಿರೋಧ ಪಕ್ಷಗಳ ನಾಯಕರ ವಿರುದ್ಧ ದಮನ ನೀತಿ ಅನುಸರಿಸುತ್ತಿದೆ. ಕೇಂದ್ರೀಯ ತನಿಖಾ ಸಂಸ್ಥೆಗಳನ್ನೆಲ್ಲ ರಾಜಕೀಯ ಸ್ವಾರ್ಥಕ್ಕೆ ಬಳಸಿಕೊಳ್ಳುತ್ತಿದ್ದು, ಕೇಂದ್ರದ ವಿರುದ್ಧ ಧ್ವನಿ ಎತ್ತಿದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸುವ ಮೂಲಕ ನೀಚ ರಾಜಕಾರಣದಲ್ಲಿ ತೊಡಗಿದೆ. ರಾಹುಲ್ ಗಾಂಧಿ ಅವರಿಗೆ ಯಾವುದೇ ನೋಟಿಸ್ ನೀಡದೇ, ವಿವರಣೆ ಪಡೆಯುವ ಸೌಜನ್ಯವನ್ನೂ ಪ್ರದರ್ಶಿಸದೇ ತನ್ನ ನಿಜ ಬಣ್ಣ ಪ್ರದರ್ಶಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಕೆಪಿಸಿಸಿ ಸದಸ್ಯ ಖ್ವಾಜಾಮೊಹಿದ್ದೀನ ಜಮಾದಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿಜಯಕುಮಾರ ದೊಡ್ಡಮನಿ, ಮಂಜು ಗೊರಣ್ಣನವರ, ನಗರ ಕಾಂಗ್ರೆಸ್ ಅಧ್ಯಕ್ಷ ಮತೀನ್ ಶಿರಬಡಗಿ, ಜಿಪಂ ಮಾಜಿ ಸದಸ್ಯರಾದ ಮಹದೇವಪ್ಪ ಬಾಗಸರ, ಕೊಟ್ರಪ್ಪ ಕುದರಿಸಿದ್ದನವರ, ತಾಪಂ ಮಾಜಿ ಅಧ್ಯಕ್ಷ ಸಿದ್ದನಗೌಡ ಪಾಟೀಲ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಪುಟ್ಟಪ್ಪ ನರೇಗಲ್, ಮುಖಂಡರಾದ ಚಂದ್ರಪ್ಪ ಜಾಲಗಾರ, ಗೀತಾ ಪೂಜಾರ, ಅನಿತಾ ಶಿವೂರ, ವೀರೇಶ ಬೈಲವಾಳ, ರಾಮಣ್ಣ ಶೇಷಗಿರಿ, ಶಿವು ತಳವಾರ, ರಾಜಣ್ಣ ಹಿರೇಮಠ, ರಾಜೂ ಗಾಡಿಗೇರ, ಪ್ರಕಾಶ ಈಳಿಗೇರ, ಮಹ್ಮದರಫೀಕ್ ಉಪ್ಪಣಸಿ, ಉಮೇಶ ಮಾಳಗಿ, ಭರಮಣ್ಣ ಶಿವೂರ, ರಾಮಚಂದ್ರ ಕಲ್ಲೇರ, ಸುರೇಶ ನಾಗಣ್ಣನವರ ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts