More

    ಹಾವನೂರ ಜಾತ್ರೆಯಲ್ಲಿ ಪ್ರಾಣಿ ಬಲಿ ತಡೆಗಟ್ಟಲು ಮನವಿ

    ಹಾವೇರಿ: ಹೈಕೋರ್ಟ್ ಆದೇಶದಂತೆ ತಾಲೂಕಿನ ಹಾವನೂರ ದ್ಯಾಮವ್ವ ದೇವಿ ಜಾತ್ರೆಯಲ್ಲಿ ಪ್ರಾಣಿ ಬಲಿ ತಡೆಗಟ್ಟುವಂತೆ ವಿಶ್ವ ಪ್ರಾಣಿ ಕಲ್ಯಾಣ ಮಂಡಳಿ ಅಧ್ಯಕ್ಷ ಶ್ರೀ ದಯಾನಂದ ಸ್ವಾಮೀಜಿ ಜಿಲ್ಲಾಡಳಿತಕ್ಕೆ ಒತ್ತಾಯಿಸಿದ್ದಾರೆ.
    ಫೆ.1ರಂದು ಗ್ರಾಮ ದೇವತೆಯ ಜಾತ್ರಾ ಮಹೋತ್ಸವ ಜರುಗಲಿದ್ದು, ಪ್ರಾಣಿ ಬಲಿ ಮಾಡುವುದನ್ನು ಕೈಬಿಟ್ಟು ಸಾತ್ವಿಕ ಹಾಗೂ ಅಹಿಂಸಾತ್ಮಕವಾಗಿ ಪೂಜೆ, ವಿಧಿ ವಿಧಾನ ಕೈಗೊಳ್ಳಬೇಕು ಎಂದು ಭಕ್ತರಲ್ಲಿ ಮನವಿ ಮಾಡಿದ್ದಾರೆ. 1959ರ ಕರ್ನಾಟಕ ಪ್ರಾಣಿ ಬಲಿಗಳ ಪ್ರತಿಬಂಧಕ ಕಾನೂನು ಮತ್ತು ನಿಯಮಗಳು ಹಾಗೂ 1975ರ ತಿದ್ದುಪಡಿ ಕಾಯ್ದೆ ಅನ್ವಯ ಯಾವುದೇ ಜಾತ್ರೆ, ಉತ್ಸವಗಳಲ್ಲಿ ಪ್ರಾಣಿಬಲಿ ನಡೆಸಿದರೆ ಶಿಕ್ಷಾರ್ಹ ಅಪರಾಧವಾಗುತ್ತದೆ. ಹಾಗಾಗಿ, ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಜರುಗಿಸುವ ಮೂಲಕ ಪ್ರಾಣಿಬಲಿ ತಡೆಗಟ್ಟಬೇಕು ಎಂದು ಸ್ವಾಮೀಜಿ ಮನವಿ ಮಾಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts