More

    6 ತಿಂಗಳಿಗೊಮ್ಮೆ ಆರೋಗ್ಯ ಪರೀಕ್ಷೆಯಾಗಲಿ

    ಮದ್ದೂರು: ಗ್ರಾಮೀಣ ಜನರು ಕೆಲಸದ ಒತ್ತಡದ ನಡುವೆ ಆರೋಗ್ಯ ನಿರ್ಲಕ್ಷಿಸುತ್ತಿದ್ದು, 6 ತಿಂಗಳಿಗೊಮ್ಮೆ ಆರೋಗ್ಯ ಪರೀಕ್ಷಿಸಿಕೊಳ್ಳಬೇಕು ಎಂದು ಸಹಸ್ರ ಕೋಟಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಬಿ.ಎಸ್.ಗೌಡ ಸಲಹೆ ನೀಡಿದರು.

    ತಾಲೂಕಿನ ಚಿಕ್ಕಹೊಸಗಾವಿ ಗ್ರಾಮದಲ್ಲಿ ಭಾನುವಾರ ಕಾರ್ಮಿಕ ಇಲಾಖೆ ಮತ್ತು ಸಹಸ್ರ ಕೋಟಿ ಚಾರಿಟಲ್ ವತಿಯಿಂದ ಆಯೋಜಿಸಿದ್ದ ಉಚಿತಾ ಆರೋಗ್ಯ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.

    ಗ್ರಾಮೀಣ ಜನರು ಕೂಲಿ ಮಾಡಿ ಜೀವನ ನಡೆಸುವ ಧಾವಂತದಲ್ಲಿ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿಲ್ಲ. ಅನಾರೋಗ್ಯಕ್ಕೆ ತುತ್ತಾದಾಗ ಆಸ್ಪತ್ರೆಗಳಿಗೆ ಹೋಗಿ ಲಕ್ಷಾಂತರ ರೂ. ಖರ್ಚು ಮಾಡಿ ಆರ್ಥಿಕ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಹಾಗಾಗಿ ಆರೋಗ್ಯ ಸಮಸ್ಯೆ ಕಂಡ ತಕ್ಷಣ ಸೂಕ್ತ ಚಿಕಿತ್ಸೆ ಪಡೆಯುವುದರಿಂದ ದೊಡ್ಡ ಆರೋಗ್ಯ ಸಮಸ್ಯೆ ಬಾರದಂತೆ ಮುಂಜಾಗ್ರತೆ ವಹಿಸಬಹುದು ಎಂದರು.

    ಆರೋಗ್ಯ ಶಿಬಿರದಲ್ಲಿ ನೂರಾರು ಜನರಿಗೆ ಕಣ್ಣು, ಕಿವಿ, ಮಧುಮೇಹ, ರಕ್ತದೊತ್ತಡಕ್ಕೆ ತಜ್ಞ ವೈದ್ಯರಿಂದ ಚಿಕಿತ್ಸೆ ಕೊಡಿಸಲಾಯಿತು. ಕುಟೀರ ಸಂಸ್ಥೆಯ ಅಧ್ಯಕ್ಷೆ ಮಂಜುಳಾ, ಅಂಗನವಾಡಿ ಕಾರ್ಯಕರ್ತೆ ಜಯಲಕ್ಷ್ಮೀ, ಆಶಾ ಕಾರ್ಯಕತೆ ಸವಿತಾ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts