More

    ಅಕ್ರಮ ಮರಳುಗಾರಿಕೆ, ಜೂಜಾಟ ತಡೆಗಟ್ಟಿ; ಜಿಲ್ಲಾಡಳಿತಕ್ಕೆ ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಹನುಮಂತಪ್ಪ ಕಬ್ಬಾರ ಆಗ್ರಹ

    ಹಾವೇರಿ: ಜಿಲ್ಲೆಯ ವಿವಿಧೆಡೆ ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಇಸ್ಪೀಟ್ ಜೂಜಾಟ, ಕಲ್ಲು ಗಣಿಗಾರಿಕೆ ಸೇರಿದಂತೆ ಅನೇಕ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದರೂ ಜಿಲ್ಲಾಡಳಿತ, ತಾಲೂಕು ಆಡಳಿತಗಳು ಯಾವುದೇ ದಿಟ್ಟ ಕ್ರಮ ತೆಗೆದುಕೊಳ್ಳದಿರುವುದನ್ನು ಆಮ್ ಆದ್ಮಿ ಪಕ್ಷ ಖಂಡಿಸುತ್ತದೆ ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಹನುಮಂತಪ್ಪ ಕಬ್ಬಾರ ಹೇಳಿದರು. ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ರಮ ಮರಳು, ಕಲ್ಲು ಗಣಿಗಾರಿಕೆ ದಂಧೆಕೋರರ ಹಾವಳಿ ಹೆಚ್ಚಾಗಿದ್ದು, ಇದರಿಂದ ಪರಿಸರಕ್ಕೆ ತೀವ್ರ ದಕ್ಕೆಯಾಗುತ್ತಿದೆ. ದಂಧೆಕೋರರು ಸರ್ಕಾರದ ಯಾವುದೇ ಭಯ ಇಲ್ಲದೇ ರಾಜಾರೋಷವಾಗಿ ಅಕ್ರಮದಲ್ಲಿ ನಿರತರಾಗಿದ್ದಾರೆ. ಇಸ್ಪೀಟ್, ಮಟ್ಕಾ ಜೂಜಾಟ ಮಿತಿಮೀರಿದ್ದು, ಇದರಿಂದ ಅನೇಕ ಕುಟುಂಬಗಳು ಬೀದಿಗೆ ಬಿದ್ದಿವೆ. ಈ ಕೂಡಲೇ ಜಿಲ್ಲಾಡಳಿತ, ಸರ್ಕಾರ ಈ ಅಕ್ರಮಗಳಿಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು. ಜಿಲ್ಲೆ ಬರದಿಂದ ಕಂಗಾಲಾಗಿದೆ. ರೈತರು ಇನ್ನಿಲ್ಲದ ಕಷ್ಟಗಳನ್ನು ಎದುರಿಸುತ್ತಿದ್ದಾರೆ. ಅನೇಕ ರೈತರು ಏನೂ ಮಾಡಲಾಗದೇ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ರಾಜ್ಯದಲ್ಲೇ ಅತಿ ಹೆಚ್ಚಿನ ರೈತ ಆತ್ಮಹತ್ಯೆಗಳು ಜಿಲ್ಲೆಯಲ್ಲಿ ನಡೆಯುತ್ತಿವೆ. ಇದಕ್ಕೆ ಕಡಿವಾಣ ಹಾಕಬೇಕಿರುವ ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷೃ ಧೋರಣೆ ತೋರುತ್ತಿದೆ. ಬರ ಪರಿಹಾರ ನೀಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮೀನಮೇಷ ಎಣಿಸುತ್ತಿವೆ. ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು ಪೂರೈಸುವಲ್ಲೂ ವಿಫಲವಾಗಿದೆ ಎಂದು ಆರೋಪಿಸಿದರು.
    ಫೈನಾನ್ಸ್, ಸ್ತ್ರೀಶಕ್ತಿ ಸಂಘಗಳು, ಸಹಕಾರಿ ಸಂಘ, ಬ್ಯಾಂಕ್‌ಗಳಲ್ಲಿ ಸಾಲ ಪಡೆದ ಬಡವರು, ರೈತರು ಸಾಲದ ಕಂತು ಕಟ್ಟಲು ಹಣ ಇಲ್ಲದೇ ಬೀದಿಗೆ ಬರುವಂತಾಗಿದೆ. ಬರಗಾಲದ ಹಿನ್ನೆಲೆಯಲ್ಲಿ ಮೂರು ತಿಂಗಳ ಕಾಲ ಹಣ ಪಾವತಿಸುವಲ್ಲಿ ರಿಯಾಯ್ತಿ ನೀಡುವಂತೆ ಜಿಲ್ಲಾಧಿಕಾರಿಯವರು ಆದೇಶಿಸಬೇಕು ಎಂದು ಆಗ್ರಹಿಸಿದರು. ಈ ಎಲ್ಲ ಸಮಸ್ಯೆಗಳಿಗೆ ಸ್ಪಂದಿಸದಿದ್ದಲ್ಲಿ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
    ಪಕ್ಷದ ಪ್ರಮುಖರಾದ ಕುಮಾರಸ್ವಾಮಿ ಯೋಗಿಮಠ, ಖಲೀಲಸಾಬ ದೊಡ್ಡಮನಿ, ಫರೀದ್ ನದಾಫ, ಶಿವನಗೌಡ ಪಾಟೀಲ, ರಾಜಶೇಖರ ದೂದಿಹಳ್ಳಿ, ಬಸಪ್ಪ ಹೊಸಕಟ್ಟಿ, ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts