ಹಾವೇರಿ: ನಗರದ ಹೊರವಲಯದ ದೇವಗಿರಿ ಸೇತುವೆ ಬಳಿ ಭಾನುವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಟ್ರ್ಯಾಕ್ಟರ್‌ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಎರಡು ವರ್ಷದ ಮಗು ಮೃತಪಟ್ಟ ಘಟನೆ ನಡೆದಿದೆ.
ಹೊಸೂರು ಯತ್ನಳ್ಳಿ ಗ್ರಾಮದ ಅಂಕಿತಾ ಲಮಾಣಿ (2) ಮೃತಪಟ್ಟ ಮಗು. ದೇವರಗುಡ್ಡದಲ್ಲಿ ದೇವರ ದರ್ಶನ ಪಡೆದು ವಾಪಸ್ ಹೊಸೂರು ಯತ್ನಳ್ಳಿ ಕಡೆಗೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ನಾಲ್ವರು ಗಾಯಾಳುಗಳನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.