More

  ರಿಯಾಯ್ತಿ ದರದಲ್ಲಿ ತಾಡಪತ್ರಿ ವಿತರಣೆ ಅರ್ಜಿ ಆಹ್ವಾನ

  ಹಾವೇರಿ: ಕೃಷಿ ಇಲಾಖೆಯ ಕೃಷಿ ಸಂಸ್ಕರಣೆ ಹಾಗೂ ಆಹಾರ ಭದ್ರತಾ ಅಭಿಯಾನ ಯೋಜನೆಯಡಿ ರಿಯಾಯ್ತಿ ದರದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ತಾಡಪತ್ರಿಗಳನ್ನು ವಿತರಿಸಲು ಹಾವೇರಿ ತಾಲೂಕಿನ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
  ಈ ಹಿಂದಿನ ಮೂರು ವರ್ಷಗಳಲ್ಲಿ ತಾಡಪತ್ರಿಗಳನ್ನು ಪಡೆಯದ ರೈತರು ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಆಸಕ್ತ ರೈತರು ಆಧಾರ್ ಕಾರ್ಡ್, ಜಮೀನಿನ ಉತಾರ, ಆರ್‌ಡಿ ನಂಬರ್ ಹೊಂದಿದ ಚಾಲ್ತಿ ಜಾತಿ ಪ್ರಮಾಣ ಪತ್ರದ ಝರಾಕ್ಸ್ ಪ್ರತಿಗಳೊಂದಿಗೆ ಅರ್ಜಿಯನ್ನು ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರಗಳಿಗೆ ಆ.14ರ ಒಳಗಾಗಿ ಸಲ್ಲಿಸಬೇಕು. ಆ.17ರಂದು ಆಯಾ ರೈತ ಸಂಪರ್ಕ ಕೇಂದ್ರಗಳಲ್ಲಿ ಲಾಟರಿ ಮುಖಾಂತರ ಫಲಾನುಭವಿಗಳ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ರೈತ ಫಲಾನುಭವಿಗಳಿಗೆ ಆ.18ರಿಂದ 31ರವರೆಗೆ ಹಂಚಿಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳನ್ನು ಹಾಗೂ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸಂಪರ್ಕಿಸಿ ಎಂದು ಸಹಾಯಕ ಕೃಷಿ ನಿರ್ದೇಶಕ ವೀರಭದ್ರಪ್ಪ ಬಿ.ಎಚ್. ತಿಳಿಸಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts