ಹಾವೇರಿ: ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ, ಮುರಾರ್ಜಿ ದೇಸಾಯಿ ವಸತಿ ಶಾಲೆ, ಕಾಲೇಜ್‌ಗಳಲ್ಲಿ ಹಾಗೂ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆ ಮತ್ತು ಕಾಲೇಜ್‌ಗಳಲ್ಲಿ 2025-26ನೇ ಸಾಲಿನಲ್ಲಿ ಬೋಧಿಸಲು ತಾತ್ಕಾಲಿಕ ಅತಿಥಿ ಶಿಕ್ಷಕರ ನೇಮಕಕ್ಕೆ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಮೇ 19ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಅಧಿಕಾರಿಗಳ ಕಾರ್ಯಾಲಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಝಾದ್ ಭವನ, ಶಿವಾಜಿ ನಗರ, 3ನೇ ಕ್ರಾಸ್, ಹಾವೇರಿ ಅಥವಾ ಆಯಾ ತಾಲೂಕುಗಳ ಅಲ್ಪಸಂಖ್ಯಾತರ ತಾಲೂಕಾ ಮಾಹಿತಿ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಅಶೋಕ ಗದ್ದಿಗೌಡರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
