More

    ಬೇಡಿಕೆ ಈಡೇರಿಸುವ ಭರವಸೆ ನೀಡಿದ ಸಿಎಂ; ಬಿಸಿಯೂಟ ತಯಾರಕರ ಪ್ರತಿಭಟನೆ ವಾಪಸ್

    ಹಾವೇರಿ: ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಮಂಗಳವಾರ ರಾಜ್ಯ ಅಕ್ಷರ ದಾಸೋಹ ಅಡುಗೆ ತಯಾರಕರ ಸಂಘದ ಅಧ್ಯಕ್ಷ ಹೊನ್ನಪ್ಪ ಮರೆಮ್ಮನವರ, ಪದಾಧಿಕಾರಿಗಳು ಶಾಸಕ ಬಸವರಾಜ ಶೀವಣ್ಣನವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅಹವಾಲು ಸಲ್ಲಿಸಿದರು. ಬಿಸಿಯೂಟ ತಯಾರಕರ ಸಮಸ್ಯೆಗಳ ಕುರಿತು ವಿವರಿಸಿದರು.
    ಮನವಿಗೆ ಸ್ಪಂದಿಸಿದ ಸಿಎಂ, ಶೀಘ್ರದಲ್ಲೇ ಅಧಿಕಾರಿಗಳ ಸಭೆ ನಡೆಸಿ ನಿಮ್ಮ ಬೇಡಿಕೆಗಳನ್ನು ಈಡೇರಿಸುತ್ತೇನೆ ಧರಣಿ ವಾಪಸ್ ಪಡೆದುಕೊಳ್ಳಿ ಎಂದು ಮನವಿ ಮಾಡಿದರು. ಈ ಹಿನ್ನೆಲೆಯಲ್ಲಿ ಫೆಡೆರೇಶನ್ ಪದಾಧಿಕಾರಿಗಳು ಹಾವೇರಿ ಡಿಸಿ ಕಚೇರಿ ಎದುರು ಆರು ದಿನದಿಂದ ನಡೆಸುತ್ತಿದ್ದ ಅಹೋರಾತ್ರಿ ಪ್ರತಿಭಟನೆ ವಾಪಸ್ ಪಡೆದ ಕುರಿತು ಘೋಷಿಸಿದರು.
    ನಂತರ ಉಪ ಸಭಾಪತಿ ರುದ್ರಪ್ಪ ಲಮಾಣಿ, ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ, ಶಿಕ್ಷಣ ಸಚಿವರ ಆಪ್ತ ಕಾರ್ಯದರ್ಶಿಯವರಿಗೆ ಮನವಿ ಸಲ್ಲಿಸಿದರು.
    ನಿಯೋಗದಲ್ಲಿ ಫೆಡರೇಶನ್‌ನ ಪದಾಧಿಕಾರಿಗಳಾದ ಜಿ.ಅಕ್ಕಮ್ಮ, ಲಲಿತಾ ಬೂಶೆಟ್ಟಿ, ರಾಜೇಶ್ವರಿ ದೊಡ್ಡಮನಿ, ಪಾರ್ವತಿ ಆಪಟಿ, ಶಕುಂತಲಾ ಸಜ್ಜನ, ಭಾರತಿ ಕಬನೂರ, ವಿದ್ಯಾ ಸಿದ್ದಪ್ಪನವರ, ಗದಿಗೆಮ್ಮ ಕುರುಬರ, ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts