ನದಿ ದಡದಲ್ಲಿ ತಿರುಗಾಡುವುದು ನಿಷೇಧ; ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಫೆ.5ರಿಂದ ಫೆ.11ರವರೆಗೆ ಪ್ರತಿದಿನ 800 ಕ್ಯೂಸೆಕ್ ನೀರು

Published on

ಹಾವೇರಿ: ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕು ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿಯ ಕಾರ್ಣಿಕೋತ್ಸವದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಫೆ.5ರಿಂದ ಫೆ.11ರವರೆಗೆ ಪ್ರತಿದಿನ 800 ಕ್ಯೂಸೆಕ್ ನೀರು ಹರಿಸಲಾಗುತ್ತಿದೆ.

ಈ ಅವಧಿಯಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನ-ಕರುಗಳನ್ನು ಮೇಯಿಸುವುದು, ನೀರುಣಿಸುವುದು ಮತ್ತು ತೋಟಗಾರಿಕೆ ಸಂಬಂಧಿಸಿದ ಕೆಲಸ ಮಾಡುವುದು ಹಾಗೂ ನದಿ ದಂಡೆಯಲ್ಲಿ ಪಂಪ್‌ಸೆಟ್ ಅಳವಡಿಸುವುದು ಮತ್ತು ಅನಧಿಕೃತವಾಗಿ ನೀರೆತ್ತುವುದನ್ನು ನಿಷೇಧಿಸಲಾಗಿದೆ ಎಂದು ಕರ್ನಾಟಕ ನೀರಾವರಿ ನಿಗಮದ ಬಿ.ಆರ್. ಪ್ರಾಜೆಕ್ಟ್ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net