More

    ಲಿಂಗ ಪತ್ತೆಯಿಂದ ಸಮಾಜದ ಮೇಲೆ ದುಷ್ಪರಿಣಾಮ; ವೃತ್ತಿ ಬದುಕಿನಲ್ಲಿ ಕಾನೂನು ಗೌರವಿಸಿ; ಕಾರ್ಯಾಗಾರದಲ್ಲಿ ನ್ಯಾಯಾಧೀಶ ಪುಟ್ಟರಾಜು ಹೇಳಿಕೆ

    ಹಾವೇರಿ: ಭ್ರೂಣಲಿಂಗ ಪತ್ತೆ ಕಾನೂನು ಪ್ರಕಾರ ಅಪರಾಧವಾಗಿದೆ. ಭ್ರೂಣಲಿಂಗ ಪತ್ತೆಯಂತಹ ಕಾರ್ಯಗಳಿಂದ ಸಮಾಜದ ಮೇಲೆ ದುಷ್ಪರಿಣಾಮ ಬೀರಲಿದೆ. ಇದರ ವಿರುದ್ಧ ಎಲ್ಲರೂ ಒಂದಾಗಿ ಹೋರಾಡಬೇಕಿದೆ ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಪುಟ್ಟರಾಜು ಹೇಳಿದರು.
    ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಸ್ತ್ರೀರೋಗ ತಜ್ಞರು, ರೇಡಿಯಾಲಜಿಸ್ಟ್ ಹಾಗೂ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಕೇಂದ್ರದ ಮಾಲೀಕರಿಗೆ/ ವೈದ್ಯಾಧಿಕಾರಿಗಳಿಗೆ ಆಯೋಜಿಸಿದ್ದ ಗರ್ಭಪೂರ್ವ ಮತ್ತು ಪ್ರಸವಪೂರ್ವ ಪತ್ತೆ ತಂತ್ರ ವಿಧಾನಗಳ (ಲಿಂಗಗ ಆಯ್ಕೆ ನಿಷೇಧ) ಕಾಯ್ದೆಯ ಪಿಸಿ ಮತ್ತು ಪಿಎನ್‌ಡಿಟಿ ಕಾಯ್ದೆ 1994ರ ಕುರಿತ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
    ಕಾನೂನು ಗೌರವಿಸುವುದು ಎಲ್ಲರ ಆದ್ಯ ಕರ್ತವ್ಯವಾಗಿದೆ. ನಮ್ಮ ವೃತ್ತಿ ಬದುಕಿಗೆ ಅಗತ್ಯವಾದ ಕಾನೂನುಗಳನ್ನು ಎಲ್ಲರೂ ತಿಳಿದುಕೊಳ್ಳಬೇಕು. ಕಾನೂನಿನ ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ವೈದ್ಯರಿಗೆ ಕಿವಿಮಾತು ಹೇಳಿದರು.
    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಎಸ್.ರಾಘವೇಂದ್ರಸ್ವಾಮಿ ಮಾತನಾಡಿ, ಎಲ್ಲರೂ ವೈದ್ಯಕೀಯ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಹಾಗೂ ದಾಖಲೆಗಳನ್ನು ಸರಿಯಾಗಿ ನಿರ್ವಹಿಸಬೇಕು ಎಂದು ಹೇಳಿದರು.
    ಬೆಂಗಳೂರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಉಪ ನಿರ್ದೇಶಕ ಡಾ.ವಿವೇಕ ದೊರೈ ಪಿಸಿ ಮತ್ತು ಪಿಎನ್‌ಡಿಸಿ ಕಾಯ್ದೆ ಹಾಗೂ ಕೆಪಿ ಎಂ.ಇ ಕಾಯ್ದೆ ಕುರಿತು ಹಾಗೂ ಅರವಳಿಕೆ ತಜ್ಞ ಡಾ.ಶಿವಕುಮಾರ ಕುಂಬಾರ ವಿಶೇಷ ಉಪನ್ಯಾಸ ನೀಡಿದರು.
    ಕಾರ್ಯಕ್ರಮದಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಪಿ.ಆರ್.ಹಾವನೂರ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ದೇವರಾಜ ಎಸ್., ಪಿಸಿ ಮತ್ತು ಪಿಎನ್‌ಡಿಸಿ ಕಾಯ್ದೆ ಜಿಲ್ಲಾ ಸಹಲಾ ಸಮಿತಿ ಅಧ್ಯಕ್ಷ ಎಂ.ವಿ.ಕುಂಟೆ, ಜಿಲ್ಲಾ ಐಎಂಎ ಅಧ್ಯಕ್ಷ ಡಾ.ಎಸ್.ಎನ್.ಮರೆಕ್ಕನವರ, ನಿವೃತ್ತ ಡಿ.ಎಚ್.ಒ ಡಾ.ಈಶ್ವರ ಮಾಳೋದೆ, ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts