More

    ಕಾಂಗ್ರೆಸ್ ರೌಡಿಸಂ ರಾಜಕಾರಣವನ್ನು ಜನ ತಿರಸ್ಕರಿಸುತ್ತಾರೆ; ದೇವೇಗೌಡರ ಸಭೆಗೆ ನುಗ್ಗಿದ ಘಟನೆಗೆ ಬೊಮ್ಮಾಯಿ ಖಂಡನೆ

    ಹಾವೇರಿ: ತುಮಕೂರಿನಲ್ಲಿ ಎಚ್.ಡಿ.ದೇವೇಗೌಡರು ಭಾಗವಹಿಸಿದ್ದ ಬಿಜೆಪಿ- ಜೆಡಿಎಸ್ ಮೈತ್ರಿ ಸಮಾವೇಶಕ್ಕೆ ಕಾಂಗ್ರೆಸ್ ನಾಯಕರು ನುಗ್ಗಿರುವ ವಿಚಾರ ಅತ್ಯಂತ ಖಂಡನೀಯವಾದದ್ದು. ರಾಜಕಾರಣದಲ್ಲಿ ರೌಡಿಸಂಅನ್ನು ಜನರು ತಿರಸ್ಕಾರ ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.
    ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭಿಪ್ರಾಯ ಭಿನ್ನವಾಗಿ ಇರಬಹುದು. ಆದರೆ, ಕನ್ನಡಿಗರ ಹೆಮ್ಮೆಯ ಮಾಜಿ ಪ್ರಧಾನಿ ಅವರ ಸಭೆಯಲ್ಲಿ ಹೀಗೆ ಮಾಡಿರುವುದು ಸರಿಯಲ್ಲ. ಹಲವು ಸಂದರ್ಭದಲ್ಲಿ ಕರ್ನಾಟಕ, ಕನ್ನಡದ ಪರ ನಿಂತವರು ಅವರು. ಇದನ್ನು ನೋಡಿದರೆ ಕಾಂಗ್ರೆಸ್‌ನವರ ಹತಾಶೆಯನ್ನು ತೋರಿಸುತ್ತದೆ ಎಂದರು.
    ಗ್ಯಾರಂಟಿ ಯೋಜನೆಯಿಂದ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂಬ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಈ ಕುರಿತು ಈಗಾಗಲೇ ಅವರು ವಿಷಾಧ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‌ನವರು ಮಹಿಳೆಯರ ಬಗ್ಗೆ ಏನೆಲ್ಲ ಮಾತಾಡಿದ್ದಾರೆ. ಬಹಳ ಕೆಟ್ಟದಾಗಿ ಮಾತನಾಡಿದ್ದಾರೆ ಎಂದು ಕುಟುಕಿದರು.
    ದೇವೇಗೌಡರಿಗೆ ರಾಜಕೀಯ ಹೇಳಿಕೆ ಕೊಡುವವಷ್ಟು ದೊಡ್ಡವರು ರಾಜ್ಯದಲ್ಲಿ ಯಾರೂ ಇಲ್ಲ. ಸಿದ್ದರಾಮಯ್ಯ ಸಹ ದೇವೇಗೌಡರ ಗರಡಿಯಲ್ಲಿ ಪಳಗಿದವರು ಎಂಬುದನ್ನು ಮರೆಯಬಾರದು. ಅವರ ಬಗ್ಗೆ ಮಾತನಾಡುವುದು ಸರಿಯಲ್ಲ. ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀತುತ್ತದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts