More

    ಬಿಜೆಪಿ ಪದಾಧಿಕಾರಿಗಳ ಆಯ್ಕೆಗೆ ಆಕ್ಷೇಪ; ಕೆಲ ಹುದ್ದೆಗಳ ಬದಲಾವಣೆಗೆ ಕಾರ್ಯಕರ್ತರ ಪಟ್ಟು; ನೂತನ ಜಿಲ್ಲಾಧ್ಯಕ್ಷರಿಗೆ ಕಗ್ಗಂಟು

    ಹಾವೇರಿ: ಹೊಸ ಹುರುಪಿನೊಂದಿಗೆ ರಾಜ್ಯ ಬಿಜೆಪಿ ನಾಯಕರು ಲೋಕಸಭೆ ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದರೆ, ಜಿಲ್ಲಾ ಬಿಜೆಪಿ ಘಟಕದಲ್ಲಿ ಪದಾಧಿಕಾರಿಗಳ ಆಯ್ಕೆ ವಿಚಾರ ಪ್ರಮುಖ ಕಾರ್ಯಕರ್ತರಿಂದಲೇ ಆಕ್ಷೇಪ ಹಾಗೂ ಅಪಸ್ವರಗಳು ಕೇಳಿ ಬರುತ್ತಿವೆ. ಇದು ಬಿಜೆಪಿ ನೂತನ ಜಿಲ್ಲಾಧ್ಯಕ್ಷ ಅರುಣಕುಮಾರ ಪೂಜಾರ ನುಂಗಲಾರದ ತುತ್ತಾಗಿ ಪರಿಣಮಿಸಿದೆ.
    ನೂತನ ಜಿಲ್ಲಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ ಜಿಲ್ಲಾ ಮತ್ತು ತಾಲೂಕು ಘಟಕಗಳಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಿದ್ದರು. ಜಿಲ್ಲಾ ಹಾಗೂ ತಾಲೂಕು ಮಟ್ಟದ ಕೆಲ ಪದಾಧಿಕಾರಿಗಳ ಆಯ್ಕೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಿ, ಜಾತಿ ಮತ್ತು ಹಣದ ಆಧಾರದ ಮೇಲೆ ತಮಗೆ ಬೇಕಾದವರನ್ನು ಆಯ್ಕೆ ಮಾಡಲಾಗಿದೆ. ಪಕ್ಷ ವಿರೋಧಿ ಚಟುವಟಿಕೆ ಮಾಡಿದವರಿಗೇ ಮಣೆ ಹಾಕಲಾಗಿದೆ ಎಂದು ಸ್ವತಃ ಕಾರ್ಯಕರ್ತರೇ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಜಿಲ್ಲಾಧ್ಯಕ್ಷರ ಎದರು ಆಕ್ರೋಶ ಹೊರಹಾಕಿದ್ದಾರೆ. ಹಾವೇರಿ ನಗರ ಹಾಗೂ ಗ್ರಾಮೀಣ ಮಂಡಲ ಅಧ್ಯಕ್ಷರು, ಮಹಿಳಾ ಮೋರ್ಚಾ, ಮತ್ತಿತರ ಪದಾಧಿಕಾರಿಗಳ ಆಯ್ಕೆ ಬಗ್ಗೆಯೂ ಅಪಸ್ವರ, ಆರೋಪಗಳು ಕೇಳಿ ಬಂದಿದ್ದು, ಕೂಡಲೇ ಅಂಥವರನ್ನು ಬದಲಾಯಿಸುವಂತೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ.
    ಪಕ್ಷ ವಿರೋಧಿಗಳಿಗೆ ಮಣೆ
    2023ನೇ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯೊಬ್ಬರಿಗೆ ಬಿ ಫಾರ್ಮ್ ಅನ್ನು ಕೆಪಿಸಿಸಿ ಅಧ್ಯಕ್ಷರಿಂದ ಪಡೆದಿದ್ದ ನಂಜುಂಡೇಶ ಕಳ್ಳೇರ ಕಾಂಗ್ರೆಸ್ ಪರ ಕೆಲಸ ಮಾಡಿದ್ದರು. ಅಂಥವರನ್ನು ಈಗ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ. ಪಕ್ಷ ವಿರೋಧಿ ಚಟುವಟಿಕೆ ಮಾಡಿದರನ್ನು ಯಾವ ಸಿದ್ಧಾಂತದ ಆಧಾರದ ಮೇಲೆ ಆಯ್ಕೆ ಮಾಡಿದ್ದಾರೆ ಎಂದು ಬಿಜೆಪಿಯ ನಗರ ಘಟಕದ ಮಾಜಿ ಅಧ್ಯಕ್ಷ ನಿರಂಜನ ಹೇರೂರು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts