More

    ಮಹಿಳಾ ಸಮಾವೇಶಕ್ಕೆ ನಟಿ ತಾರಾ ಆಗಮನ; 18ರಂದು ವಿವಿಧೆಡೆ ಆಯೋಜನೆ; ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸೃಷ್ಟಿ ಪಾಟೀಲ

    ಹಾವೇರಿ: ಜಿಲ್ಲೆಯ ವಿವಿಧೆಡೆ ಏ.18ರಂದು ಆಯೋಜಿಸಿರುವ ಮಹಿಳಾ ಸಮಾವೇಶಗಳಲ್ಲಿ ಭಾಗವಹಿಸಲು ಬಿಜೆಪಿ ಪಕ್ಷದ ತಾರಾ ಪ್ರಚಾರಕಿ, ನಟಿ ತಾರಾ ಅವರು ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷೆ ಸೃಷ್ಟಿ ಪಾಟೀಲ ಹೇಳಿದರು.
    ನಗರದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.18ರಂದು ಬೆಳಗ್ಗೆ 10 ಗಂಟೆಗೆ ರಾಣೆಬೆನ್ನೂರ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿರುವ ಮಹಿಳಾ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಹಾವೇರಿಯ ಕೊಳ್ಳಿ ಪಾಲಿಟೆಕ್ನಿಕ್ ಮೈದಾನದ ಪಕ್ಕದ ಆವರಣದಲ್ಲಿ ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಮಹಿಳಾ ಸಮಾವೇಶದಲ್ಲಿ ಪಾಲ್ಗೊಳ್ಳುವರು. ಸಂಜೆ 5 ಗಂಟೆಗೆ ಹಾನಗಲ್ಲ ತಾಲೂಕು ಅಕ್ಕಿಆಲೂರಿನಲ್ಲಿ ಆಯೋಜಿಸಿರುವ ಮಹಿಳಾ ಸಮಾವೇಶದಲ್ಲಿ ಪಾಲ್ಗೊಳ್ಳುವರು ಎಂದರು.
    ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶೋಭಾ ನಿಸ್ಸಿಮಗೌಡ್ರ ಮಾತನಾಡಿ, ಸಮಾವೇಶದಲ್ಲಿ 4ರಿಂದ 5 ಸಾವಿರ ಮಹಿಳೆಯರು ಭಾಗವಹಿಸುವ ನಿರೀಕ್ಷೆ ಇದೆ. ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರ ಪತ್ನಿ ಚನ್ನಮ್ಮ ಬೊಮ್ಮಾಯಿ, ಸೇರಿದಂತೆ ಜಿಲ್ಲೆಯ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸುವರು ಎಂದರು.
    ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ದಾರಿ ತಪ್ಪಿದಾರೆ ಎಂದು ಹೇಳಲು ಆಗುವುದಿಲ್ಲ. ಗ್ಯಾರಂಟಿ ಯೋಜನೆಗಳಿಂದ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಹೇಳುವಾಗ ಹಾಗೆ ಹೇಳಿರಬಹುದು. ಗ್ಯಾರಂಟಿ ಯೋಜನೆಗಳಿಂದ ಆಗುತ್ತಿರುವ ಸಮಸ್ಯೆಗಳ ಕುರಿತು ಹಳ್ಳಿಗಳಲ್ಲಿ ಮಹಿಳೆಯರು ಮಾತನಾಡುತ್ತಿದ್ದಾರೆ. ಇದರಿಂದ ಎಷ್ಟೋ ಕುಟುಂಬಗಳಲ್ಲಿ ಜಗಳಗಳು ಶುರುವಾಗಿವೆ ಎಂದರು.
    ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ.ಸಂತೋಷ ಆಲದಕಟ್ಟಿ, ಜಿಲ್ಲಾ ವಕ್ತಾರ ನಿರಂಜನ ಹೆರೂರ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಲಲಿತಾ ಗುಂಡೇನಹಳ್ಳಿ, ಜಿಲ್ಲಾ ಮಾಧ್ಯಮ ಸಹ ಪ್ರಮುಖ ದೀಪಕ ಮಡಿವಾಳರ, ಲಕ್ಷ್ಮೀ ಜೋಶಿ, ಅನಸುಯಾ ಯರವಿನತೆಲೆ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts