More

  ಹಗಲು-ರಾತ್ರಿ ದುಡಿದು ಪ್ರಧಾನಿ ಮೋದಿ ಕೈಬಲಪಡಿಸಿ; ಹಾವೇರಿ ಲೋಕಸಭಾ ಕ್ಷೇತ್ರದ ಪ್ರಭಾರಿ ಅರವಿಂದ ಬೆಲ್ಲದ ಕರೆ

  ಹಾವೇರಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕೈಬಲಪಡಿಸಲು ಕಾರ್ಯಕರ್ತರು ಹಗಲು- ರಾತ್ರಿ ಶ್ರಮಿಸಬೇಕು. ಬಸವರಾಜ ಬೊಮ್ಮಾಯಿ ಅವರ ಗೆಲುವಿಗೆ ಕಾರಣಿಕರ್ತರಾಗಬೇಕು ಎಂದು ಹಾವೇರಿ ಲೋಕಸಭಾ ಕ್ಷೇತ್ರದ ಪ್ರಭಾರಿ, ಶಾಸಕ ಅರವಿಂದ ಬೆಲ್ಲದ ಕರೆ ನೀಡಿದರು.
  ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಹಾವೇರಿ ವಿಧಾನಸಭಾ ಕ್ಷೇತ್ರದ ಸಭೆಯಲ್ಲಿ ಅವರು ಮಾತನಾಡಿದರು.
  ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಮಹಾಮಾರಿ ಕೋವಿಡ್ ನಿರ್ವಹಣೆ, ಬಡ ರೈತ ಮಕ್ಕಳಿಗೆ ವಿದ್ಯಾನಿಧಿ ಯೋಜನೆ, ಕಿಸಾನ್ ಸಮ್ಮಾನ್ ಯೋಜನೆ, ಹಿಂದುಳಿದ ವರ್ಗ ಮತ್ತು ಎಸ್.ಸಿ. ಎಸ್.ಟಿ ಸಮುದಾಯಕ್ಕೆ ಯೋಜನೆಗಳನ್ನು ಕೊಟ್ಟಿದ್ದಾರೆ. ಇವುಗಳನ್ನು ಜನರಿಗೆ ತಿಳಿಸಿ ಎಂದರು.
  ಮಾಜಿ ಶಾಸಕ ಶಿವರಾಜ ಸಜ್ಜನರ ಮಾತನಾಡಿ, ಮಹಿಳೆಯರು ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳಿಗೆ ಕಿವಿಗೊಡದೆ ದೇಶದ ಉಜ್ವಲ ಭವಿಷ್ಯಕ್ಕಾಗಿ, ಮಹಿಳೆಯರ ಸಬಲೀಕರಣಕ್ಕಾಗಿ, ಸದೃಢ ದೇಶ ನಿರ್ಮಾಣಕ್ಕಾಗಿ ನರೇಂದ್ರ ಮೋದಿ ಅವರನ್ನು ಮೊತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಬೇಕೆಂದು ಹೇಳಿದರು.
  ಸಭೆಯಲ್ಲಿ ಗವಿಸಿದ್ದಪ್ಪ ದ್ಯಾಮಣ್ಣನವರ, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜಕುಮಾರ ಬಸವ, ಜಿಲ್ಲಾ ಉಪಾಧ್ಯಕ್ಷ ಬಸವರಾಜ ಕಳಸೂರ, ನಗರ ಅಧ್ಯಕ್ಷ ಗಿರೀಶ ತುಪ್ಪದ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಡಾ.ಸಂತೋಷ ಆಲದಕಟ್ಟಿ, ನಂಜುಂಡೇಶ ಕಳ್ಳೇರ, ಮಂಜುನಾಥ ಗಾಣಿಗೇರ, ಜಿಲ್ಲಾ ವಕ್ತಾರ ನಿರಂಜನ ಹೆರೂರ, ಇತರರು ಇದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts