More

    ರಾಜ್ಯ ಸರ್ಕಾರದಿಂದ ಯೋಜನೆಗಳ ಹೆಸರಲ್ಲಿ ಸುಲಿಗೆ; ಲೋಕಸಭಾ ಚುನಾವಣೆ ಅವಲೋಕನ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಟೀಕೆ

    ಹಾವೇರಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಹಾಡಹಗಲೇ ಮಹಿಳೆಯರ ಹತ್ಯೆಗಳು ನಡೆಯುತ್ತಿವೆ. ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆದರೂ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಯೋಜನೆಗಳ ಹೆಸರಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯವನ್ನು ಸುಲಿಗೆ ಮಾಡುತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಟೀಕಿಸಿದರು.
    ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಬುಧವಾರ ಆಯೋಜಿಸಿದ್ದ ಲೋಕಸಭಾ ಚುನಾವಣೆಯ ಅವಲೋಕನ ಸಭೆಯಲ್ಲಿ ಅವರು ಮಾತನಾಡಿದರು.
    ದೇಶದಲ್ಲಿ ಈ ಬಾರಿ ಬಿಜೆಪಿ 400ಕ್ಕಿಂತ ಅಧಿಕ ಸ್ಥಾನಗಳನ್ನು ಗೆಲ್ಲುತ್ತದೆ. ಈ ಬಾರಿ ಮತದಾರರು ಕಾಂಗ್ರೆಸ್ ಪಕ್ಷದ ಸುಳ್ಳು ಭರವಸೆಗಳಿಗೆ ಮನಸೊಲದೇ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಸಾಧನೆಗಳನ್ನು ಮನಗಂಡು ಬಿಜೆಪಿಗೆ ಮತ ಚಲಾಯಿಸಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲಿನ ಭಯ ಪ್ರಾರಂಭವಾಗಿದೆ. ರಾಜ್ಯದ ಕಾಂಗ್ರೆಸ್ ಪಕ್ಷದ ನಾಯಕರಿಗೆ ಮೋದಿಯವರನ್ನು ತೆಗಳುವುದನ್ನು ಬಿಟ್ಟರೆ ಬೇರೆ ಕೆಲಸಗಳಿಲ್ಲ. ಮೋದಿಯವರು 3ನೇ ಬಾರಿಗೆ ಪ್ರಧಾನಿಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ. ನಾವೆಲ್ಲರೂ ಆತ್ಮವಿಶ್ವಾಸದಿಂದ ಕೆಲಸ ಮುಂದುವರಿಸೋಣ ಎಂದು ಹೇಳಿದರು.
    ಲೋಕಸಭಾ ಕ್ಷೇತ್ರದ ಸಂಚಾಲಕ ಮಂಜುನಾಥ ಓಲೇಕಾರ, ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ, ಗವಿಸಿದ್ದಪ್ಪ ದ್ಯಾಮ್ಮಣ್ಣನವರ ಮಾತನಾಡಿದರು.
    ಸಭೆಯಲ್ಲಿ ಮಾಜಿ ಮುಖ್ಯ ಸಚೇತಕ ಡಿ,ಎಂ.ಸಾಲಿ, ಜಿಲ್ಲಾ ಸಂಘಟನಾ ಪ್ರಭಾರಿ ಎನ್,ಎಲ್.ಕಲ್ಲೇಶ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಡಾ.ಶೋಭಾ ನಿಸ್ಸಿಮಗೌಡ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ನಂಜುಡೇಶ ಕಳ್ಳೇರ, ಡಾ.ಸಂತೋಷ ಆಲದಕಟ್ಟಿ, ಮಂಜುನಾಥ ಗಾಣಿಗೇರ, ಜಿಲ್ಲಾ ವಕ್ತಾರ ನಿರಂಜನ ಹೆರೂರ ಹಾಗೂ ಜಿಲ್ಲೆಯ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಪದಾಧಿಕಾರಿಗಳು, ವಿವಿಧ ಮಂಡಲಗಳ ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರದ ಪ್ರಮುಖರು ಹಾಗೂ ಮುಖಂಡರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts