More

    ಬಿಜೆಪಿ ಜಿಲ್ಲಾ ಎಸ್‌ಟಿ ಮೋರ್ಚಾ ಸಮಾವೇಶ ಫೆ.5ರಂದು; ಮಂಜುನಾಥ ಓಲೇಕಾರ ಹೇಳಿಕೆ

    ಹಾವೇರಿ: ಬಿಜೆಪಿ ಜಿಲ್ಲಾ ಎಸ್‌ಟಿ ಮೋರ್ಚಾ ಘಟಕದ ವತಿಯಿಂದ ಫೆ.5ರಂದು ಬೆಳಗ್ಗೆ 11 ಗಂಟೆಗೆ ನಗರದ ಶಿವಶಕ್ತಿ ಪ್ಯಾಲೇಸ್‌ನಲ್ಲಿ ಪರಿಶಿಷ್ಟ ಪಂಗಡಗಳ ಜಿಲ್ಲಾ ಮಟ್ಟದ ‘ಮುನ್ನಡೆ ಸಮಾವೇಶ’ ಆಯೋಜಿಸಲಾಗಿದೆ ಎಂದು ಎಸ್‌ಟಿ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಂಜುನಾಥ ಓಲೇಕಾರ ಹೇಳಿದರು.
    ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಸಚಿವರಾದ ಬಿ.ಶ್ರೀರಾಮುಲು, ರಾಜುಗೌಡ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಬಿ.ಸಿ.ಪಾಟೀಲ, ಎಸ್‌ಟಿ ಮೋರ್ಚಾದ ರಾಜ್ಯಾಧ್ಯಕ್ಷ ಬಂಗಾರ ಹನುಮಂತಪ್ಪ, ಶಿವರಾಜ ಸಜ್ಜನರ, ವಿರುಪಾಕ್ಷಪ್ಪ ಬಳ್ಳಾರಿ, ಇತರರು ಭಾಗವಹಿಸಲಿದ್ದಾರೆ ಎಂದರು.
    ಕೇಂದ್ರ ಹಾಗೂ ರಾಜ್ಯದ ಹಿಂದಿನ ಬಿಜೆಪಿ ಸರ್ಕಾರದ ಯೋಜನೆಗಳನ್ನು ಜನರಿಗೆ ತಿಳಿವಳಿಕೆ ಮೂಡಿಸುವ ನಿಟ್ಟಿನಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಪ್ರತಿ ಗ್ರಾಪಂನಿಂದ ಹತ್ತು ಜನ ಭಾಗವಹಿಸುವರು ಎಂದರು.
    ಎಸ್‌ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಶಿವಾನಂದ ಯಮನಕ್ಕನವರ, ಗವಿಸಿದ್ದಪ್ಪ ದ್ಯಾಮಣ್ಣವರ, ಪ್ರಧಾನ ಕಾರ್ಯದರ್ಶಿ ಶಿವಪುತ್ರ ಕಲಕೋಟಿ, ರುದ್ರೇಶ ಚಿನ್ನಣ್ಣನವರ, ಬಸವರಾಜ ಕಳಸೂರ, ರಾಜೇಂದ್ರ ಬಸೇನಾಯ್ಕ, ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts