More

    ರಕ್ತದಾನ ಜಾಗೃತಿ ಜಾಥಾಕ್ಕೆ ಚಾಲನೆ

    ಹಾವೇರಿ: ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ಅಂಗವಾಗಿ ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ನಗರಸಭೆ ಸದಸ್ಯ ಸಂಜೀವಕುಮಾರ ನೀರಲಗಿ ಚಾಲನೆ ನೀಡಿದರು.
    ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸ್ಪತ್ರೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಹಯೋಗದಲ್ಲಿ ಜಿಲ್ಲಾಸ್ಪತ್ರೆ ಆವರಣದಿಂದ ಆರಂಭವಾದ ಜಾಥಾ ಪಿಬಿ ರಸ್ತೆ ಮಾರ್ಗವಾಗಿ ತಾಲೂಕು ಆರೋಗ್ಯ ಭವನದ ವರೆಗೆ ಸಾಗಿತು. ಜಾಥಾದಲ್ಲಿ ವಿದ್ಯಾರ್ಥಿಗಳು ಜಾಗೃತಿ ಘೋಷಣೆಗಳನ್ನು ಕೂಗುತ್ತ ಸಾರ್ವಜನಿಕರಿಗೆ ಕರಪತ್ರಗಳನ್ನು ಹಂಚಿದರು.
    ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಘವೇಂದ್ರಸ್ವಾಮಿ ಎಚ್.ಎಸ್., ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಪಿ.ಆರ್.ಹಾವನೂರ, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ನೀಲೇಶ ಎಂ.ಎನ್, ಸತೀಶಕುಮಾರ ಹೊಸಮನಿ, ವಿರಾಜ ಸುಣಗಾರ, ಮಂಜುನಾಥ ಹಟ್ಟಿ, ಮಂಜುನಾಥ ಟಿ.ಬಿ, ಹಾಗೂ ಜಿಲ್ಲೆಯ ಎಲ್ಲ ಐಸಿಟಿಸಿ ಕೇಂದ್ರದ ಸಿಬ್ಬಂದಿ, ಎ.ಆರ್.ಟಿ ಕೇಂದ್ರದ ವೈದ್ಯಾಧಿಕಾರಿಗಳು, ಸಿಬ್ಬಂದಿ, ಜಿಲ್ಲೆಯ ಎಲ್ಲ ರಕ್ತ ನಿಧಿಕೇಂದ್ರದ ಸಿಬ್ಬಂದಿ, ಇತರರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts