More

    ಬೊಮ್ಮಾಯಿ ನಾಮಪತ್ರ ಸಲ್ಲಿಕೆ ಏ.19ರಂದು; ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ವಿವಿಧ ಗಣ್ಯರು ಭಾಗಿ

    ಹಾವೇರಿ: ಹಾವೇರಿ- ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಏ.19ರಂದು ಬೃಹತ್ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸಲಿದ್ದಾರೆ.
    ಮಧ್ಯಾಹ್ನ 12 ಗಂಟೆಗೆ ನಗರದ ಪುರ ಸಿದ್ದೇಶ್ವರ ದೇವಸ್ಥಾನದಿಂದ ಬೃಹತ್ ಮೆರವಣಿಗೆ, ರೋಡ್ ಶೋ ಆರಂಭವಾಗಲಿದೆ. ಕೊಳ್ಳಿ ಪಾಲಿಟೆಕ್ನಿಕ್ ಪಕ್ಕದ ಮೈದಾನದಲ್ಲಿ ಸಮಾವೇಶ ನಡೆಯಲಿದೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಆರ್.ಅಶೋಕ, ಉಪನಾಯಕ ಅರವಿಂದ ಬೆಲ್ಲದ, ಮಾಜಿ ಸಚಿವರಾದ ಬಿ.ಸಿ.ಪಾಟೀಲ, ಸಿ.ಸಿ.ಪಾಟೀಲ, ಬಿ.ಶ್ರೀರಾಮುಲು, ಮುರುಗೇಶ ನಿರಾಣಿ, ಭೈರತಿ ಬಸವರಾಜ, ಕಳಕಪ್ಪ ಬಂಡಿ, ಸುನೀಲಕುಮಾರ, ನಟಿ ತಾರಾ ಅನುರಾಧಾ, ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು, ಪದಾಧಿಕಾರಿಗಳು, ಸಹಸ್ರಾರು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts