More

    ಭ್ರೂಣಲಿಂಗ ಪತ್ತೆ ಮಾಹಿತಿ ನೀಡಿದವರಿಗೆ 50 ಸಾವಿರ ರೂ. ಬಹುಮಾನ

    ಹಾವೇರಿ: ಜಿಲ್ಲೆಯಲ್ಲಿ ಖಾಸಗಿ ಕ್ಲಿನಿಕ್, ಆಸ್ಪತ್ರೆ, ಸ್ಕ್ಯಾನಿಂಗ್ ಸೆಂಟರ್‌ಗಳಲ್ಲಿ ಅಕ್ರಮವಾಗಿ ಭ್ರೂಣಲಿಂಗ ಪತ್ತೆ ಮಾಡುವ ಅಥವಾ ಭ್ರೂಣ ಹತ್ಯೆ ಮಾಡುವ ಪ್ರಕರಣಗಳು ಕಂಡುಬಂದರೆ ಈ ಕುರಿತು ಮಾಹಿತಿ ನೀಡಿದವರಿಗೆ 50 ಸಾವಿರ ರೂ. ನಗದು ಬಹುಮಾನ ನೀಡುವುದಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಘೋಷಿಸಿದೆ.
    ಜಿಲ್ಲೆಯಾದ್ಯಂತ ಖಾಸಗಿ ಕ್ಲಿನಿಕ್, ಆಸ್ಪತ್ರೆ, ಸ್ಕ್ಯಾನಿಂಗ್ ಸೆಂಟರ್‌ಗಳು ಪಿ.ಸಿ.ಮತ್ತು ಪಿ.ಎನ್.ಡಿ.ಟಿ. ಕಾಯ್ದೆಯಡಿ ನೋಂದಣಿ ಪಡೆದು ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲಾ ತಪಾಸಣಾ ಮತ್ತು ಮೇಲ್ವಿಚಾರಣಾ ಸಮಿತಿಯಿಂದ ಕಾಲಕಾಲಕ್ಕೆ ತಪಾಸಣೆ ನಡೆಸಲಾಗುತ್ತಿದೆ. ಖಾಸಗಿ ಕ್ಲಿನಿಕ್, ಆಸ್ಪತ್ರೆ, ಸ್ಕ್ಯಾನಿಂಗ್ ಸೆಂಟರ್‌ಗಳಲ್ಲಿ ಇಲಾಖೆಯ ಕಣ್ತಪ್ಪಿಸಿ ಭ್ರೂಣಲಿಂಗ ಪತ್ತೆ ಮತ್ತು ಭ್ರೂಣ ಹತ್ಯೆ ಮಾಡುವಂತೆ ದಲ್ಲಾಳಿಗಳು ಅಥವಾ ಗರ್ಭಿಣಿಯರ ಸಂಬಂಧಿಕರು ವೈದ್ಯರಿಗೆ ಒತ್ತಾಯಿಸುವ ಪ್ರಕರಣಗಳು ಹಾಗೂ ಗರ್ಭಿಣಿಯರಿಗೂ ಲಿಂಗಪತ್ತೆಗೆ ಹಾಗೂ ಭ್ರೂಣಹತ್ಯೆ ಮಾಡಲು ಒಪ್ಪಿಸುವ ಪ್ರಕರಣಗಳು ಕಂಡುಬಂದಲ್ಲಿ ಮಾಹಿತಿ ನೀಡುವಂತೆ ಕೋರಲಾಗಿದೆ. ಇಂಥವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಇಂತಹ ಪ್ರಕರಣ ನ್ಯಾಯಾಲಯದಲ್ಲಿ ದಾಖಲಾದರೆ ಆರೋಪ ಸಾಬೀತಾದಲ್ಲಿ ರಾಜ್ಯ ಸಕ್ಷಮ ಪ್ರಾಧಿಕಾರದಿಂದ ಮಾಹಿತಿ ನೀಡಿದವರಿಗೆ 50 ಸಾವಿರ ರೂ. ಬಹುಮಾನ ನೀಡಲಾಗುವುದು. ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಎಸ್.ರಾಘವೇಂದ್ರಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts