More

  ಬಸ್‌ನಲ್ಲಿ 52.12 ಕೋಟಿ ಮಹಿಳೆಯರ ಉಚಿತ ಪ್ರಯಾಣ; ಶಕ್ತಿ ಯೋಜನೆ ಜಾರಿಯಾಗಿ ಜೂ.11ಕ್ಕೆ ಒಂದು ವರ್ಷ

  ಹಾವೇರಿ: ಶಕ್ತಿ ಯೋಜನೆ ಜಾರಿಯಾಗಿ ಜೂ.11ಕ್ಕೆ ಒಂದು ವರ್ಷ ಪೂರ್ಣಗೊಂಡಿದ್ದು, ಅಂದಿನಿಂದ ಈವರೆಗೆ ಸಂಸ್ಥೆಯ ವಾಹನಗಳಲ್ಲಿ ಒಟ್ಟು 52.12 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಪ್ರಯಾಣದ ಮೊತ್ತ 1,352.68 ಕೋಟಿ ರೂ. ಆಗಿದೆ.
  ಪ್ರತಿದಿನ ಸರಾಸರಿ ಸುಮಾರು 14.28 ಲಕ್ಷ ಮಹಿಳಾ ಪ್ರಯಾಣಿಕರು ಸಂಸ್ಥಯ ಸಾರಿಗೆಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. ರಾಜ್ಯದಲ್ಲಿ ವಾಸವಾಗಿರುವ ಮಹಿಳೆಯರಿಗೆ ಸಂಸ್ಥೆಯ ನಗರ, ಉಪನಗರ, ಸಾಮಾನ್ಯ, ವೇಗದೂತ ಸಾರಿಗೆಗಳಲ್ಲಿ ರಾಜ್ಯದಲ್ಲಿ ಹಾಗೂ ಆಯ್ದ ಅಂತರರಾಜ್ಯ ವೇಗದೂತ ಸಾರಿಗೆಗಳಲ್ಲಿ ರಾಜ್ಯದ ಗಡಿಯವರೆಗೆ ಉಚಿತವಾಗಿ ಪ್ರಯಾಣಿಸುವ ಯೋಜನೆ ಇದಾಗಿದೆ. ಇದರ ಯಶಸ್ಸಿಗೆ ಶ್ರಮಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  See also  ಸಿರಿಧಾನ್ಯ ಪಾಕ ಸ್ಪರ್ಧೆಯಲ್ಲಿ ಮಾಲತೇಶ, ವಿಜಯಲಕ್ಷ್ಮೀ ಗೆಲುವು

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts