More

  ನಮ್ಮ ನಡೆ ಮತಗಟ್ಟೆ ಕಡೆಗೆ ಧ್ವಜಾರೋಹಣ; ಮತದಾನ ಜಾಗೃತಿಗಾಗಿ ಗಲ್ಲಿ ಕ್ರಿಕೆಟ್ ಏ.28ರಂದು

  ಹಾವೇರಿ: ಲೋಕಸಭಾ ಚುನಾವಣೆ ಅಂಗವಾಗಿ ಮತದಾರರಲ್ಲಿ ತಮ್ಮ ಮತಗಟ್ಟೆ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಏ.28ರಂದು ಬೆಳಗ್ಗೆ 8 ಗಂಟೆಗೆ ನಗರದ ವಿದ್ಯಾನಗರ ಪಂಚಾಯತ್ ರಾಜ್ ಇಂಜನೀಯರಿಂಗ್ ಕಚೇರಿ ಆವರಣದಲ್ಲಿ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಂತರ ಬಸವೇಶ್ವರ ನಗರದ ಸಂತೆ ಮೈದಾನ ರಸ್ತೆಯಲ್ಲಿ ಗಲ್ಲಿ ಕ್ರಿಕೆಟ್ ಕಾರ್ಯಕ್ರಮ ಆಯೋಜಿಸಲಾಗಿದೆ.
  ಜಿಲ್ಲೆಯ ಎಲ್ಲ ಮತಗಟ್ಟೆಗಳಲ್ಲಿ ಏಕಕಾಲಕ್ಕೆ ಧ್ವಜಾರೋಹಣ ಮಾಡುವ ಮೂಲಕ ರಾಷ್ಟ್ರೀಯ ಹಬ್ಬದ ಮಾದರಿಯಲ್ಲಿ ‘ನಮ್ಮ ನಡೆ ಮತಗ್ಟೆಯ ಕಡೆ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಅಕ್ಷಯ ಶ್ರೀಧರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts