More

    ಅಂಬೇಡ್ಕರ್ ಅವರನ್ನೇ ಸೋಲಿಸಿತ್ತು ಕಾಂಗ್ರೆಸ್; ಚಲವಾದಿ ಸಮುದಾಯದ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಹೇಳಿಕೆ

    ಹಾವೇರಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ಮೊದಲಿನಿಂದಲೂ ಅವಮಾನ ಮಾಡುತ್ತ ಬಂದಿದೆ. ಚುನಾವಣೆಯಲ್ಲಿ ಅವರನ್ನು ಸೋಲಿಸಿದ್ದು ಇದೇ ಕಾಂಗ್ರೆಸ್. ಮಹಾತ್ಮಾ ಗಾಂಧಿ ಅವರ ಪಕ್ಕದಲ್ಲಿ ಅಂಬೇಡ್ಕರ್ ಇರಬಾರದೆಂದು ಅವರ ಅಂತ್ಯ ಸಂಸ್ಕಾರಕ್ಕೆ ದೆಹಲಿಯಲ್ಲಿ ಜಾಗ ನೀಡದೇ ದೊಡ್ಡ ಅವಮಾನ ಮಾಡಿದವರು ಕಾಂಗ್ರೆಸ್‌ನವರು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.
    ನಗರದಲ್ಲಿ ಭಾನುವಾರ ಆಯೋಜಿಸಿದ್ದ ಚಲವಾದಿ ಸಮುದಾಯದ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸ್ವಾತಂತ್ರ್ಯ ಹೋರಾಟದಲ್ಲಿ ದಲಿತರ ಪಾತ್ರ ಬಹಳ ದೊಡ್ಡದಿದೆ. ಯಾವಾಗ ದಲಿತರು ಹಿಂದುಳಿದವರು ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದರೋ ಆಗ ಬ್ರಿಟೀಷರು ತಮಗೆ ಉಳಿಗಾಲವಿಲ್ಲ ಎಂದು ತೀರ್ಮಾನಿಸಿದರು ಎಂದರು.
    ಇಂದಿರಾ ಗಾಂಧಿ, ರಾಜೀವ ಗಾಂಧಿಗೆ ಭಾರತ ರತ್ನ ಕೊಟ್ಟಿದ್ದ ಕಾಂಗ್ರೆಸ್ಸಿಗರು ಅಂಬೇಡ್ಕರ್ ಅವರಿಗೆ 90ರ ದಶಕದವರೆಗೂ ಭಾರತ ರತ್ನ ಕೊಟ್ಟಿರಲಿಲ್ಲ. ವಿ.ಪಿ.ಸಿಂಗ್ ಸರ್ಕಾರ ಅಂಬೇಡ್ಕರ್ ಅವರಿಗೆ ಭಾರತ ರತ್ನ ಕೊಟ್ಟಿತು. ಅಂಬೇಡ್ಕರ್ ಅವರ ಚುನಾವಣೆಗೆ ಬೆಂಬಲ ಕೊಟ್ಟಿದ್ದು, ಅಂದಿನ ಜನಸಂಘ. ಇವರು ಈಗ ಮೀಸಲಾತಿ ರದ್ದಾಗುತ್ತದೆ ಎಂದು ಹೇಳುತ್ತಾರೆ. ಐವತ್ತು ವರ್ಷ ದಲಿತರ ಅಭಿವೃದ್ಧಿ ಮಾಡಬಹುದಿತ್ತು. ಮತಗಳು ಕೈ ತಪ್ಪುತ್ತವೆ ಎನ್ನುವ ಕಾರಣಕ್ಕೆ ಮೀಸಲಾತಿ ರದ್ದಾಗುತ್ತದೆ ಎಂದು ಸುಳ್ಳು ಹರಡುತ್ತಿದ್ದಾರೆ ಎಂದರು.
    ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ಮೂವತ್ತು ವರ್ಷಗಳಿಂದ ಬೇಡಿಕೆ ಇತ್ತು. ಯಾರೂ ಮಾಡಿರಲಿಲ್ಲ. ನಾನು ಎಸ್ಸಿಗೆ 15ರಿಂದ 17ರಷ್ಟು ಎಸ್ಟಿ ಸಮುದಾಯಕ್ಕೆ ಶೇ.3ರಿಂದ ಶೇ.7ರಷ್ಟು ಹೆಚ್ಚಳ ಮಾಡಿದೆ. ಇದರಿಂದ ಆ ಸಮುದಾಯದ ವಿದ್ಯಾರ್ಥಿಗಳಿಗೆ ಎಂಜನೀಯರಿಂಗ್, ಮೆಡಿಕಲ್ ಕಾಲೇಜುಗಳಲ್ಲಿ ಹೆಚ್ಚಿನ ಸೀಟುಗಳು ಸಿಗುತ್ತಿವೆ ಎಂದರು.
    ಸಭೆಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಡಿ.ಎಸ್.ವೀರಯ್ಯ, ಡಾ.ಕ್ರಾಂತಿಕಿರಣ, ವೆಂಕಟೇಶ ನಾರಾಯಣಿ, ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts