More

    ಬಾಲಕಾರ್ಮಿಕ ಪದ್ದತಿ ನಿರ್ಮೂಲನೆ ಕುರಿತ ಸಂಚಾರಿ ಜಾಗೃತಿ ಪ್ರಚಾರ ವಾಹನಕ್ಕೆ ಚಾಲನೆ

    ಹಾವೇರಿ: ನಗರದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಚೇರಿ ಆವರಣದಲ್ಲಿ ಗುರುವಾರ ಪ್ಯಾನ್ ಇಂಡಿಯಾ ರಕ್ಷಣೆ ಮತ್ತು ಪುನರ್ವಸತಿ ಯೋಜನೆ ಅಂಗವಾಗಿ ಜಿಲ್ಲೆಯಾದ್ಯಂತ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ದತಿ ನಿರ್ಮೂಲನೆ ಕುರಿತ ಸಂಚಾರಿ ಜಾಗೃತಿ ಪ್ರಚಾರ ವಾಹನಕ್ಕೆ ಹಿರಿಯ ದಿವಾಣಿ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪುಟ್ಟರಾಜು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
    ಜಿಲ್ಲಾ ಕಾರ್ಮಿಕ ಅಧಿಕಾರಿ ಮಹೇಶ ಕುಳಲಿ ಮಾತನಾಡಿ, ಈ ಸಂಚಾರಿ ಜಾಗೃತಿ ಪ್ರಚಾರ ವಾಹನವು ರೇಡಿಯೋ ಜಿಂಗಲ್ಸ್ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತಾದ ಆಡಿಯೋ ಮೂಲಕ ಎಸ್.ಸಿ. ಮತ್ತು ಎಸ್.ಟಿ. ಕಾಲನಿಗಳಲ್ಲಿ, ಗ್ರಾಮ ಪಂಚಾಯಿತಿ, ಹೋಬಳಿ ಮಟ್ಟದಲ್ಲಿ, ತಾಲೂಕು ಮಟ್ಟದಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ಜಾಗೃತಿ ಮೂಡಿಸಲಿದೆ ಎಂದರು.
    ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅಣ್ಣಪ್ಪ ಹೆಗಡೆ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಎಸ್.ಎಚ್.ಮಜೀದ್, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಸ್ಥೆ ನಿರ್ದೇಶಕ ರಾಘವೆಂದ್ರ ಶಿರೂರ, ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts