More

    ಪರಸ್ಪರ ಸಮನ್ವಯ, ಸಹಕಾರದಿಂದ ಕೆಲಸ ಮಾಡಿ; ಸಿಐಡಿ ಕಾನೂನು ಸಲಹೆಗಾರ ಮಹೇಶ ವೈದ್ಯ

    ಹಾವೇರಿ: ಚುನಾವಣಾ ಸಂದರ್ಭದಲ್ಲಿ ಅಧಿಕಾರದ ಅಂತಸ್ತು, ಹುದ್ದೆ ಹಿರಿತನವನ್ನು ಮರೆತು ಎಲ್ಲರ ಅನುಭವವನ್ನು ಪಡೆದು ಪರಸ್ಪರ ಸಮನ್ವಯ, ಮಾಹಿತಿ ವಿನಿಮಯ ಹಾಗೂ ಸಹಕಾರದಿಂದ ಕಾರ್ಯ ನಿರ್ವಹಿಸಿದರೆ ಯಶಸ್ವಿಯಾಗಿ ಚುನಾವಣಾ ಕಾರ್ಯಗಳನ್ನು ನಿರ್ವಹಿಸಬಹುದು ಎಂದು ಸಿ.ಐ.ಡಿ. ಕಾನೂನು ಸಲಹೆಗಾರ ಮಹೇಶ ವೈದ್ಯ ಸಲಹೆ ನೀಡಿದರು.
    ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಚುನಾವಣಾ ನಿಯಮಾಳಿಗಳು, ಕಾಯ್ದೆಗಳ ಕುರಿತು ಚುನಾವಣಾ ಅಧಿಕಾರಿಗಳಿಗಾಗಿ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ವಿಶೇಷ ಉಪನ್ಯಾಸ ನೀಡಿದರು. ವಿಧಾನಸಭಾ ಚುನಾವಣೆ ನ್ಯಾಯೋಚಿತವಾಗಿ ಹಾಗೂ ಪರಿಣಾಮಕಾರಿಯಾಗಿ ನಡೆಸಲು ಚುನಾವಣಾ ಆಯೋಗ ಕಾಲಕಾಲಕ್ಕೆ ಹೊರಡಿಸುವ ಆದೇಶಗಳು, ಮಾರ್ಗಸೂಚಿಗಳ ಜತೆಗೆ ಪ್ರಜಾ ಪ್ರಾತಿನಿಧಿಕ ಕಾಯ್ದೆ 1951ರ ಹಾಗೂ ಭಾರತೀಯ ದಂಡ ಸಂಹಿತೆ 1860ರ ಅರಿವು ಹಾಗೂ ತಿಳುವಳಿಕೆ ಚುನಾವಣಾ ಕಾರ್ಯನಿತರಿಗೆ ಅವಶ್ಯ ಎಂದು ಹೇಳಿದರು.
    ಜಿಲ್ಲಾಧಿಕಾರಿ ರಘುನಂದನ ಮೂರ್ತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶಿವಕುಮಾರ ಗುಣಾರೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ ಹಾಗೂ ಆದಾಯ ತೆರಿಗೆ ಅಧಿಕಾರಿ ಫಕ್ಕೀರೇಶ ಮಾತನಾಡಿದರು.
    ಹೆಚ್ಚುವರಿ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಗೋಪಾಲ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಗೀತಾ ಸಿ.ಡಿ., ಚುನಾವಣಾಧಿಕಾರಿ ನಾರಾಯಣರೆಡ್ಡಿ ಕನಕರೆಡ್ಡಿ, ಸೋಮಶೇಖರ ಮುಳ್ಳಳ್ಳಿ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts