More

    ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಮೌನಜ್ವಾಲೆ; ಬಿಜೆಪಿ ದ್ವೇಷ ರಾಜಕಾರಣಕ್ಕೆ ಕೈ ಆಕ್ರೋಶ

    ಹಾವೇರಿ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರನ್ನು ಲೋಕಸಭೆ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲು ಕೇಂದ್ರ ಸರ್ಕಾರ ಸೇಡಿನ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಮೈಲಾರ ಮಹದೇವಪ್ಪ ವೃತ್ತದಲ್ಲಿ ಬುಧವಾರ ಕೇಂದ್ರ ಸರ್ಕಾರದ ವಿರುದ್ಧ ಮೌನ ಪ್ರತಿಭಟನೆ ನಡೆಸಲಾಯಿತು.
    ರಾಹುಲ್ ಗಾಂಧಿ ವಿವಿಧ ವೇದಿಕೆಗಳಲ್ಲಿ ಪ್ರಧಾನಿ ಮೋದಿ ಮತ್ತು ಅದಾನಿ ನಡುವಿನ ಸಂಬಂಧವನ್ನು ನಿರಂತರವಾಗಿ ಪ್ರಶ್ನಿಸುತ್ತಿದ್ದಾರೆ ಮತ್ತು ಬಹಿರಂಗಪಡಿಸುತ್ತಿದ್ದಾರೆ. ರಾಹುಲ್ ಅವರ ಈ ನಿರ್ಭೀತಿಯ ನಡವಳಿಕೆಯನ್ನು ಸಹಿಸಿಕೊಳ್ಳದ ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಹುಲ್ ಅವರನ್ನು ಲೋಕಸಭೆಯ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲು ಅಗತ್ಯವಾದ ಎಲ್ಲ ಕ್ರಮಗಳನ್ನು ಅನುಸರಿಸುತ್ತಿದೆ.
    ಇಷ್ಟೆಲ್ಲ ಅಡಚಣೆಗಳ ನಡುವೆಯೂ ರಾಹುಲ್ ಗಾಂಧಿ ಜನರ ಒಳಿತಿಗಾಗಿ, ನ್ಯಾಯ-ಸತ್ಯಕ್ಕಾಗಿ, ಜನರ ಸಮಸ್ಯೆಗಳನ್ನು ಎತ್ತಿ ಹಿಡಿಯಲು ನಿರಂತರವಾಗಿ ಶ್ರಮಿಸುತ್ತಿದ್ದಾರೆ. ರಾಹುಲ್ ಅವರಿಗೆ ನೀಡಿರುವ ಶಿಕ್ಷೆ ಮತ್ತು ಅನರ್ಹತೆಯನ್ನು ಕಾಂಗ್ರೆಸ್ ಖಂಡಿಸುತ್ತದೆ ಎಂದು ಪ್ರತಿಭಟನಾಕಾರರು ಸಂದೇಶ ರವಾನಿಸಿದರು.
    ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಂ.ಹಿರೇಮಠ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಂ.ಮೈದೂರ, ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಕೊಟ್ರೇಶಪ್ಪ ಬಸೆಗಣ್ಣಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಹಿರೇಮಠ, ನಗರಸಭೆ ಸದಸ್ಯರಾದ ಸಚಿನ ಡಂಬಳ, ಗಣೇಶ ಬಿಷ್ಟಣ್ಣನವರ, ಪ್ರಭುಗೌಡ ಬಿಷ್ಟನಗೌಡ್ರ, ಜಗದೀಶ ಬೆಟಗೇರಿ, ದಾಸಪ್ಪ ಕರ್ಜಗಿ, ಪರಸಪ್ಪ ಅಡಕಿ, ಮಾದೇಗೌಡ ಗಾಜಿಗೌಡ್ರ, ಸುನೀಲ ಜಮಾದಾರ, ಪ್ರೇಮಾ ಪಾಟೀಲ, ಶಾಂತಾ ಶಿರೂರ, ಲಲಿತಾ ಹುಗ್ಗಿ, ರೇಣುಕಾ ಪುತ್ರನ್, ಪೂಜಾ ಹಿರೇಮಠ, ಉಮೀದ್ ನದಾಫ್, ಬಸವರಾಜ ಬಳ್ಳಾರಿ, ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts