More

    ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಸಚಿವರಿಂದ ಚಾಲನೆ

    ಹಾವೇರಿ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ದಿನಾಚರಣೆ ಪ್ರಯುಕ್ತ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಅಂಗವಾಗಿ ಜಿಲ್ಲೆಯಾದ್ಯಂತ ಸಂಚರಿಸಲಿರುವ ಸ್ಥಬ್ದಚಿತ್ರಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರು ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಚಾಲನೆ ನೀಡಿದರು.
    ಫೆಬ್ರುವರಿ 23ರವರೆಗೆ ಜಿಲ್ಲೆಯ 223 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ ಸ್ಥಬ್ದಚಿತ್ರ ಮೆರವಣಿಗೆ ಎರಡು ಮಾರ್ಗಗಳಲ್ಲಿ ಸಂಚರಿಸಲಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನದ ಆಶಯಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ವಿಶೇಷವಾಗಿ ಸ್ಥಬ್ದಚಿತ್ರಗಳನ್ನು ವಿನ್ಯಾಸ ಮಾಡಲಾಗಿದ್ದು, ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಜಿಲ್ಲೆಯ ಮಹಾನ್ ವ್ಯಕ್ತಿಗಳಾದ ಕನಕದಾಸ, ಸರ್ವಜ್ಞ, ಶಿಶುನಾಳ ಷರೀಫ ಮತ್ತಿತರ ಮಹನೀಯರ ಪ್ರತಿಮೆಗಳನ್ನು ಹೊತ್ತು ಸಾಮಾಜಿಕ ಸಮಾನತೆಯ ಸಂದೇಶವನ್ನು ಗ್ರಾಮ ಗ್ರಾಮಗಳಿಗೆ ಭಿತ್ತರಿಸಲಾಗುವುದು.
    ಇದರೊಂದಿಗೆ ಭಾರತ ಸಂವಿಧಾನದ ಸಂದೇಶದ ಕಿರುಚಿತ್ರ ಹಾಗೂ ಆರ್ಥಿಕ ಶಕ್ತಿ ನೀಡಲು ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಎಲ್.ಇ.ಡಿ.ವಾಹನ, ಜಾನಪದ ಸಂಗೀತ, ಬೀದಿನಾಟಕ ಹಾಗೂ ಸಂವಿಧಾನ ಕುರಿತ ಕಿರು ಉಪನ್ಯಾಸ ಮಾಲಿಕೆ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts