More

    ರಾಷ್ಟ್ರೀಯ ಲೋಕ ಅದಾಲತ್ 8ರಂದು

    ಹಾವೇರಿ: ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಜು.8ರಂದು ರಾಷ್ಟ್ರೀಯ ಲೋಕ ಅದಾಲತ್ ಜರುಗಲಿದ್ದು, ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಗಳನ್ನು ತಕ್ಷಣ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ.
    ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ. ಹೆಚ್ಚಿನ ಮಾಹಿತಿಗೆ ಉಚಿತ ಸಹಾಯವಾಣಿ 1800-425-909000 ಸಂಪರ್ಕಿಸುವಂತೆ ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪಟ್ಟರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
    ದಂಡಕ್ಕೆ ಶೇ.50ರಷ್ಟು ರಿಯಾಯ್ತಿ
    ಸಂಚಾರಿ ನಿಯಮ ಉಲ್ಲಂಘನೆ ದಂಡದ ಮೊತ್ತ ಪಾವತಿಗೆ ಸರ್ಕಾರ ಶೇ.50ರಷ್ಟು ರಿಯಾಯ್ತಿ ನೀಡಿ ಆದೇಶ ಹೊರಡಿಸಿದೆ. ಸಾರ್ವಜನಿಕರು ಸಂಚಾರ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ರಿಯಾಯ್ತಿ ಪಡೆಯಬಹುದು. ಈ ಆದೇಶವು 2923ರ ಫೆಬ್ರವರಿ 11ರ ಒಳಗಿನ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತೆ ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts