More

    ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಫೆ.5ರ ರಾತ್ರಿ 10 ಗಂಟೆಯಿಂದ, ಫೆ.10ರ ರಾತ್ರಿ 10 ಗಂಟೆವರೆಗೆ ನೀರು; ನದಿ ಪಾತ್ರದಲ್ಲಿ ತಿರುಗಾಡುವುದು ನಿಷೇಧ

    ಹಾವೇರಿ: ಜಿಲ್ಲೆ ಒಳಗೊಂಡಂತೆ ತುಂಗಭದ್ರಾ ನದಿ ಆಶ್ರಿತ ಕುಡಿಯುವ ನೀರಿನ ಯೋಜನೆಗಳಿಗೆ ನೀರು ಪೂರೈಸಲು ಹಾಗೂ ಮೈಲಾರಲಿಂಗೇಶ್ವರ ಸ್ವಾಮಿ ವಾರ್ಷಿಕ ಕಾರ್ಣಿಕೋತ್ಸವ ಜಾತ್ರೆಯ ನಿಮಿತ್ತ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಫೆ.5ರ ರಾತ್ರಿ 10 ಗಂಟೆಯಿಂದ ಫೆ.10ರ ರಾತ್ರಿ 10 ಗಂಟೆವರೆಗೆ ಪ್ರತಿದಿನ ಎರಡು ಸಾವಿರ ಕ್ಯೂಸೆಕ್ಸ್‌ನಂತೆ ಒಟ್ಟು ಆರು ದಿನಗಳ ಕಾಲ 12 ಸಾವಿರ ಕ್ಯೂಸೆಕ್ಸ್ ನೀರು ನದಿಗೆ ಹರಿಬಿಡಲಾಗುತ್ತಿದೆ.
    ಜಿಲ್ಲೆಯಲ್ಲಿ ಬೇಸಿಗೆ ನೀರಿನ ಅಭಾವ ನೀಗಿಸಲು ತುಂಗಭದ್ರಾ ನದಿಗೆ ನೀರು ಹರಿಸುವಂತೆ ಬೆಳಗಾವಿ ಪ್ರಾದೇಶಿಕ ಆಯುಕ್ತರ ಮೂಲಕ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ನೀರು ಹರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ನದಿ ಪಾತ್ರದಲ್ಲಿ ಸಾರ್ವಜನಿಕರು ತಿರುಗಾಡುವುದು, ಜಾತ್ರಾ ಮಹೋತ್ಸಗಳನ್ನು ಹಮ್ಮಿಕೊಳ್ಳುವುದು ಮತ್ತು ದನಕರುಗಳನ್ನು ನದಿಗೆ ಇಳಿಸುವುದು ಮತ್ತು ನಿರ್ಮಾಣ ಕಾಮಗಾರಿಗಳನ್ನು ನದಿಯಲ್ಲಿ ನಡೆಸುವುದನ್ನು ನಿಷೇಧಿಸಲಾಗಿದೆ. ರೈತರು ನದಿ ದಂಡೆಯಲ್ಲಿ ಅಳವಡಿಸಿರುವ ಅನಧಿಕೃತ ಪಂಪ್‌ಸೆಟ್‌ಗಳಿಂದ ನೀರೆತ್ತುವುದನ್ನು ಸಹ ನಿಷೇಧಿಸಲಾಗಿದೆ ಎಂದು ಕರ್ನಾಟಕ ನೀರಾವರಿ ನಿಗಮದ ಬಿ.ಆರ್.ಪ್ರಾಜೆಕ್ಟ್ ಅಧೀಕ್ಷಕ ಅಭಿಯಂತರರು ಹಾಗೂ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts