More

    ಪ್ರಜಾಪ್ರಭುತ್ವದ ಸುಭದ್ರತೆಗಾಗಿ ಮತದಾನ ಮಾಡಿ; ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಡಿಸಿ ರಘುನಂದನ ಮೂರ್ತಿ

    ಹಾವೇರಿ: ಮತದಾನ ಸಂವಿಧಾನಿಕ ಹಕ್ಕು ಮತ್ತು ಕರ್ತವ್ಯವಾಗಿದೆ. ಪ್ರಜಾಪ್ರಭುತ್ವದ ಸುಭದ್ರತೆಗೆ 18 ವರ್ಷ ತುಂಬಿದ ದೇಶದ ಪ್ರತಿಯೊಬ್ಬ ಪ್ರಜೆಯೂ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿ, ಮತದಾನ ಮಾಡಬೇಕು ಎಂದು ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಹೇಳಿದರು.
    ನಗರದ ಗುರುಭವನದಲ್ಲಿ ಗುರುವಾರ ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, ಪ್ರತಿಜ್ಞಾವಿಧಿ ಬೋಧಿಸಿ ಅವರು ಮಾತನಾಡಿದರು. ನಾವೆಲ್ಲರೂ ಕಾನೂನಿನ ಚೌಕಟ್ಟಿನಡಿ ಕಾರ್ಯನಿರ್ವಹಿಸುತ್ತಿದ್ದೇವೆ. ಸಾರ್ವಜನಿಕರ ಹಿತಾಸಕ್ತಿಗೆ ಶಾಸಕಾಂಗದಲ್ಲಿ ಕಾನೂನುಗಳನ್ನು ಜಾರಿಗೊಳಿಸುತ್ತಾರೆ. ಅಧಿಕಾರಿಗಳು ಅವುಗಳನ್ನು ಅನುಷ್ಠಾನಗೊಳಿಸುತ್ತಾರೆ ಎಂದರು.
    ಮತದಾನದ ಅರಿವು ಮೂಡಿಸುವ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಲ್ಲಿ ಕ್ಲಬ್‌ಗಳನ್ನು ರಚಿಸಲಾಗಿದೆ. ಜಿಲ್ಲೆಯಲ್ಲಿ 13.10 ಲಕ್ಷ ಮತದಾರರಿದ್ದು, ಮತದಾರರ ಪಟ್ಟಿಯನ್ನು ಜಿಲ್ಲೆಯ ಎಲ್ಲ ಮತಗಟ್ಟೆಗಳಲ್ಲಿ ಪ್ರಕಟಿಸಲಾಗಿದೆ. ಈ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇರುವ ಬಗ್ಗೆ ಪರಿಶೀಲಿಸಲು ತಿಳಿಸಬೇಕು. ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲವಾದಲ್ಲಿ ಕೂಡಲೇ ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಬೇಕು ಎಂದರು.
    ಅಧ್ಯಕ್ಷತೆ ವಹಿಸಿದ್ದ ಜಿಪಂ ಸಿಇಒ ಅಕ್ಷಯ ಶ್ರೀಧರ ಮಾತನಾಡಿ, ಜಿಲ್ಲೆಯಲ್ಲಿ ಜಿಲ್ಲಾ ಸ್ವೀಪ್ ಸಮಿತಿಯಿಂದ ವಿವಿಧ ಚಟುವಟಿಕೆಗಳ ಮೂಲಕ ಮತದಾನ ಜಾಗೃತಿ ಮೂಡಿಸಲಾಗುತ್ತಿದೆ. ಜಾತಿ, ಧರ್ಮ, ಪುರುಷ-ಮಹಿಳೆ ಎನ್ನದೇ ಎಲ್ಲರಿಗೂ ಮತದಾನದ ಸಮಾನ ಹಕ್ಕು ನೀಡಲಾಗಿದೆ. ಯಾವುದೇ ಆಸೆ-ಆಮಿಷಗಳಿಗೆ ಒಳಗಾಗದೇ ಮತದಾನ ಮಾಡಬೇಕು. ಮತದಾನ ಮಾಡಲು ಉಡಗೊರೆ ನೀಡುವುದು ಕಂಡುಬಂದರೆ ದೂರು ನೀಡಬಹುದು ಎಂದರು.
    ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಹಿರಿಯ ದಿವಾಣಿ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪುಟ್ಟರಾಜು, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ.ಉಮೇಶಪ್ಪ ಎಚ್., ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸುರೇಶ ಹುಗ್ಗಿ, ಉಪವಿಭಾಗಾಧಿಕಾರಿ ಹಾಗೂ ಮತದಾರರ ನೋಂದಣಾಧಿಕಾರಿ ಚನ್ನಪ್ಪ ಎಚ್.ಬಿ., ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿ ಡಾ.ಎಲ್.ನಾಗರಾಜ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಮಮತಾ, ಅಬಕಾರಿ ಇಲಾಖೆ ಉಪಆಯುಕ್ತೆ ಶೈಲಜಾ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ರೇಷ್ಮಾ ಕೌಸರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದರ್ತಿ, ಕೃಷಿ ಇಲಾಖೆ ಉಪನಿರ್ದೇಶಕ ಹುಲಿರಾಜು, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರವೀಣ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಅಣ್ಣಯ್ಯ, ಪಿಐ ಮೋತಿಲಾಲ ಪವಾರ, ಮತ್ತಿತರರು ಉಪಸ್ಥಿತರಿದ್ದರು.
    ತಹಶೀಲ್ದಾರ ಶಂಕರ ಬಾರ್ಕಿ ಸ್ವಾಗತಿಸಿದರು. ಶಿಕ್ಷಕ ನಾಗರಾಜ ನಡುವಿನಮಠ ನಿರೂಪಿಸಿದರು. ಎಸ್.ಆರ್.ಮಳವಳ್ಳಿ ವಂದಿಸಿದರು.

    ಬಹುಮಾನ ವಿತರಣೆ:
    ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಪ್ರಬಂಧ, ಭಿತ್ತಿಪತ್ರ, ಮತ್ತಿತರ ಸ್ಪರ್ಧೆಗಳ ವಿಜೇತರಿಗೆ ಪ್ರಮಾಣಪತ್ರ ವಿತರಿಸಲಾಯಿತು.
    ಹಲವರಿಗೆ ಸನ್ಮಾನ:
    ಮತದಾರರ ನೋಂದಣಿಯಲ್ಲಿ ಅತ್ಯುತ್ತಮ ಕಾರ್ಯನಿರ್ವಹಿಸಿದ ಇ.ಎಲ್.ಸಿ. ನೋಡಲ್ ಅಧಿಕಾರಿಗಳಾದ ಬ್ಯಾಡಗಿ ತಾಲೂಕು ಬಿಸಲಹಳ್ಳಿ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಶಂಕರ ಲಮಾಣಿ, ಹಾನಗಲ್ಲ ಆಡೂರ ಕರ್ನಾಟಕ ಪಬ್ಲಿಕ್ ಶಾಲೆಯ ಶಿಕ್ಷಕ ಶ್ರೀನಿವಾಸ ಕಲಾಲ, ಹಾವೇರಿ ತಾಲೂಕು ಕರ್ಜಗಿ ಕರ್ನಾಟಕ ಪಬ್ಲಿಕ್ ಶಾಲೆಯ ಶಿಕ್ಷಕಿ ರೇಷ್ಮಾ ಮಹೇಂದ್ರಕರ, ಹಿರೇಕೆರೂರ ತಾಲೂಕು ಯತ್ತಿನಹಳ್ಳಿ ಮಾರುತಿ ಪ್ರೌಢಶಾಲೆಯ ವಿ.ಎಂ.ಹರಿಹರ, ರಟ್ಟಿಹಳ್ಳಿ ತಾಲೂಕು ಯಡಗೋಡ ಸರ್ಕಾರಿ ಪ್ರೌಢಾಶಾಲೆಯ ಪ್ರಕಾಶ ಗುಬ್ಬಿ, ರಾಣೆಬೆನ್ನೂರ ನಗರದ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಶಿವರಾಜ ಅಡರಕಟ್ಟಿ, ಸವಣೂರ ತಾಲೂಕು ಡಂಬರಮತ್ತೂರ ಶಿವಶರಣ ಹರಳಯ್ಯನವರ ಪ್ರೌಢಶಾಲೆ ಶಿಕ್ಷಕ ನಾಗರಾಜ ಬೆಟಗೇರಿ ಹಾಗೂ ಶಿಗ್ಗಾಂವಿಯ ಚನ್ನಬಸಪ್ಪ ಕುನ್ನೂರ ಪ್ರೌಢಶಾಲೆ ಶಿಕ್ಷಕ ಕುಮಾರ ಮಲ್ಲೂರ ಅವರನ್ನು ಸನ್ಮಾನಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts