ಹಾವೇರಿ: ಆದ್ಯತಾ ಪಡಿತರ ಚೀಟಿಯ ಫಲಾನುಭವಿಗಳಿಗೆ ರಾಷ್ಟ್ರೀಯ ಭದ್ರತಾ ಕಾಯ್ದೆ ಅನ್ವಯ ಫೆಬ್ರವರಿ ಹಾಗೂ ಮಾರ್ಚ್ ತಿಂಗಳು ಪಡಿತರ ಸೇರಿ ಪ್ರತಿ ಸದಸ್ಯರಿಗೆ 15 ಕೆ.ಜಿ ಅಕ್ಕಿ ವಿತರಣೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ತಿಳಿಸಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆಬ್ರವರಿ ತಿಂಗಳಿಂದ ಹಣದ ಬದಲು ಅಕ್ಕಿ ನೀಡಲಾಗುವುದು ಎಂದು ಸರ್ಕಾರ ಘೋಷಿಸಿತ್ತು. ಹಾಗಾಗಿ, ಮಾರ್ಚ್‌ನಲ್ಲಿ ಫೆಬ್ರವರಿಗೆ 5 ಕೆಜಿ ಹೆಚ್ಚುವರಿ ಅಕ್ಕಿ ಸೇರಿಸಿ, ಪಿಎಚ್‌ಎಚ್(ಬಿಪಿಎಲ್)ನ ಪ್ರತಿ ಫಲಾನುಭವಿಗೆ ಒಟ್ಟು 15 ಕೆಜಿ ಅಕ್ಕಿ ವಿತರಿಸಲಾಗುವುದು. ಈಗಾಗಲೇ ಶೇ.29.17ರಷ್ಟು ಪಡಿತರ ಅಕ್ಕಿ ವಿತರಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ಪಡಿತರ ವಿತರಣೆಯಲ್ಲಿ ಯಾವುದೇ ಸಮಸ್ಯೆ ಇರುವುದಿಲ್ಲ ಎಂದು ತಿಳಿಸಿದರು.
ಅಕ್ರಮ ಪಡಿತರ ಸಾಗಣೆ ಹೆಚ್ಚಾಗಿರುವ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಸಿ, ಅಕ್ರಮ ಪಡಿತರ ಸಾಗಣೆದಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ರಮೇಶ ಎಂ.ಎಸ್. ಅವರಿಗೆ ಸೂಚಿಸಿದರು.