More

    ಗರ್ಭಿಣಿಯರು, ಮಕ್ಕಳು ತಪ್ಪದೇ ಲಸಿಕೆ ಹಾಕಿಸಿಕೊಳ್ಳಿ; ಡಿಸಿ ರಘುನಂದನ ಮೂರ್ತಿ ಮನವಿ

    ಹಾವೇರಿ: ಹನ್ನೆರೆಡು ಮಾರಕ ರೋಗಗಳ ವಿರುದ್ಧ ಗರ್ಭಿಣಿ- ಮಕ್ಕಳಿಗೆ ರಕ್ಷಣೆ ನೀಡುವ ಲಸಿಕೆಗಳಿಂದ ವಂಚಿತರಾಗಿರುವ ಗರ್ಭಿಣಿಯರು ಹಾಗೂ 5 ವರ್ಷದ ಮಕ್ಕಳಿಗೆ ಲಸಿಕೆ ನೀಡಲು ಅ.9ರಿಂದ 14ರವರೆಗೆ ಜಿಲ್ಲೆಯಾದ್ಯಂತ ಮಿಷನ್ ಇಂದ್ರಧನುಷ್ ಯೋಜನೆಯಡಿ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಲಸಿಕೆ ತಪ್ಪಿಸಿಕೊಂಡವರು ತಪ್ಪದೇ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಮನವಿ ಮಾಡಿದರು.
    ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಮೂರನೇ ಸುತ್ತಿನ ಮಿಷನ್ ಇಂದ್ರಧನುಷ್ ಲಸಿಕಾ ಕಾರ್ಯಕ್ರಮದ ಸಿದ್ಧತೆ ಕುರಿತು ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆ ಸಭೆಯಲ್ಲಿ ಆರೋಗ್ಯ ಇಲಾಖೆ ಹಾಗೂ ಸಂಬಂಧಿಸಿದ ಇತರೆ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂಧಿ ಜತೆ ಡಿಸಿ ಸಭೆ ನಡೆಸಿದರು. ಲಸಿಕಾ ಕಾರ್ಯಕ್ರಮವನ್ನು ಅತ್ಯಂತ ವ್ಯವಸ್ಥಿತವಾಗಿ ಕೈಗೊಳ್ಳಲು ಸೂಚಿಸಿದರು.
    ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ.ಜಯಾನಂದ ಮಾತನಾಡಿ, ಈಗಾಗಲೇ ಆಗಸ್ಟ್, ಸೆಪ್ಟಂಬರ್‌ನಲ್ಲಿ 2 ಸುತ್ತುಗಳು ಪೂರ್ಣಗೊಂಡಿವೆ. ಜಿಲ್ಲೆಯಲ್ಲಿ ಶೇ.98ರಷ್ಟು ಗರ್ಭಿಣಿಯರಿಗೆ ಹಾಗೂ ಮಕ್ಕಳಿಗೆ ಲಸಿಕೆ ನೀಡಿರುವುದಾಗಿ ವಿವರಿಸಿದರು.
    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಎಸ್.ರಾಘವೇಂದ್ರಸ್ವಾಮಿ ಮಾತನಾಡಿ, ಆರೋಗ್ಯ ಇಲಾಖೆ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆ ಮಾಡಿ ಅರ್ಹ ಫಲಾನುಭವಿಗಳ ಪಟ್ಟಿ ತಯಾರಿಸಿದ್ದಾರೆ. ಅಭಿಯಾನದಂದು ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ನಗರ ಆರೋಗ್ಯ ಕೇಂದ್ರಗಳು, ನಮ್ಮ ಕ್ಲಿನಿಕ್, ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳು ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ವಿಶೇಷ ಲಸಿಕಾ ಸತ್ರಗಳನ್ನು ಏರ್ಪಡಿಸಿ ಲಸಿಕೆ ನೀಡುವ ಗುರಿ ಹಾಕಿಕೊಳ್ಳಲಾಗಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts