More

    ಪ್ರಚಾರ ಕಾರ್ಯಕ್ಕೆ ಮಕ್ಕಳನ್ನು ಬಳಸುವಂತಿಲ್ಲ; ಜಿಲ್ಲಾಧಿಕಾರಿ ರಘುನಂದನ ಮೂರ್ತಿ

    ಹಾವೇರಿ: ಲೋಕಸಭಾ ಚುನಾವಣೆ ಪ್ರಚಾರ ಕಾರ್ಯಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳದಂತೆ ರಾಜಕೀಯ ಪಕ್ಷಗಳಿಗೆ ಕೇಂದ್ರ ಚುನಾವಣಾ ಆಯೋಗ ಸೂಚನೆ ನೀಡಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘದ ಅಧ್ಯಕ್ಷ ರಘುನಂದನ ಮೂರ್ತಿ ತಿಳಿಸಿದ್ದಾರೆ.
    ಬಿತ್ತಿ ಪತ್ರಗಳು, ಕರಪತ್ರಗಳ ಹಂಚುವಿಕೆ ಅಥವಾ ಅಂಟಿಸುವಿಕೆ ಮತ್ತು ಘೋಷಣೆ ಕೂಗಲು ಮಕ್ಕಳನ್ನು ಬಳಸಿಕೊಳ್ಳಬಾರದು. ಕವಿತೆ, ಹಾಡು, ರಾಜಕೀಯ ಪಕ್ಷಗಳ ಚಿಹ್ನೆಗಳ ಪ್ರದರ್ಶನ ಸೇರಿದಂತೆ ಯಾವುದೇ ರೀತಿಯಲ್ಲಿಯೂ ಮಕ್ಕಳನ್ನು ಬಳಸಿಕೊಳ್ಳುವಂತಿಲ್ಲ. ಚುನಾವಣಾ ಪ್ರಚಾರದ ವೇಳೆ ರಾಜಕೀಯ ನಾಯಕರು ಮಗುವನ್ನು ಎತ್ತಿ ಹಿಡಿಯುವಂತಿಲ್ಲ. ಮಗು ಅಥವಾ ಮಕ್ಕಳನ್ನು ವಾಹನಗಳಲ್ಲಿ ಕುಳ್ಳರಿಸಿಕೊಂಡು ರ‌್ಯಾಲಿಗಳಲ್ಲಿ ಕರೆದೊಯ್ಯೂವಂತಿಲ್ಲ. ಅಲ್ಲದೇ ಚುನಾವಣಾ ಉದ್ದೇಶದಿಂದ ಮಕ್ಕಳನ್ನು ಯಾವುದೇ ಕೆಲಸಕ್ಕೆ ಮಕ್ಕಳನ್ನು ಬಳಸಿಕೊಳ್ಳುವಂತಿಲ್ಲ ಎಂದು ತಿಳಿಸಿದ್ದಾರೆ.
    ಕೇಂದ್ರ ಸರ್ಕಾರವು ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ಮಕ್ಕಳ ದುಡಿಮೆಯನ್ನು ನಿಯಂತ್ರಿಸಲು ಹಾಗೂ ನಿಷೇಧಿಸಲು ಬಾಲಕಾರ್ಮಿಕ ಹಾಗೂ ಕಿಶೋರಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ-1986 ಜಾರಿಗೆ ತಂದಿದೆ. ಈ ಕಾಯ್ದೆಯನ್ವಯ ಎಲ್ಲ ಉದ್ಯೋಗ ಮತ್ತು ಪ್ರಕ್ರಿಯೆಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಹಾಗೂ 14ರಿಂದ 18ರ ವಯಸ್ಸಿನ ಕಿಶೋರ ಕಾರ್ಮಿಕ ಮಕ್ಕಳನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಒಂದು ವೇಳೆ ಕಾಯ್ದೆ ಉಲ್ಲಂಘಿಸಿ ಮಕ್ಕಳನ್ನು ಕೆಲಸ ಅಥವಾ ಇನ್ನಾವುದೇ ಕೆಲಸಗಳಲ್ಲಿ ನೇಮಿಸಿಕೊಂಡಲ್ಲಿ ಕಲಂ 14ರ ಅಡಿಯಲ್ಲಿ ಎರಡು ವರ್ಷದವರೆಗೆ ವಿಸ್ತರಿಸಬಹುದಾದ ಜೈಲುಶಿಕ್ಷೆ ಮತ್ತು 50,000 ರೂ. ದಂಡ ವಿಧಿಸಬಹುದಾಗಿದೆ. ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಂಡರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts