More

    ಮತಗಟ್ಟೆಗೆ ಇಂದು ವಿದ್ಯುನ್ಮಾನ ಯಂತ್ರ; 224 ಬಸ್‌ಗಳ ವ್ಯವಸ್ಥೆ, 6,958 ಸಿಬ್ಬಂದಿ ನಿಯೋಜನೆ

    ಹಾವೇರಿ: ಹಾವೇರಿ ಲೋಕಸಭಾ ಕ್ಷೇತ್ರದ ಚುನಾವಣೆಗೆ ಮೇ 7ರಂದು ಮತದಾನ ನಡೆಯಲಿದೆ. ಹಾಗಾಗಿ, ಮೇ 6ರಂದೇ ಮಸ್ಟರಿಂಗ್ ಕೇಂದ್ರಗಳಿಂದ ಆಯಾ ಮತಗಟ್ಟೆಗಳಿಗೆ ವಿದ್ಯುನ್ಮಾನ ಮತಯಂತ್ರಗಳೊಂದಿಗೆ ನಿಯೋಜಿತ ಮತಗಟ್ಟೆ ಅಧಿಕಾರಿ, ಸಿಬ್ಬಂದಿ ತೆರಳಲಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಘುನಂದನ ಮೂರ್ತಿ ತಿಳಿಸಿದ್ದಾರೆ.
    ಭಾನುವಾರ ಜಿಲ್ಲೆಯ ಮಸ್ಟರಿಂಗ್ ಸಿದ್ಧತಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಹಾವೇರಿ ಕ್ಷೇತ್ರದ ಐದು ವಿಧಾನಸಭಾ ಕ್ಷೇತ್ರ ಹಾಗೂ ಧಾರವಾಡ ಕ್ಷೇತ್ರ ವ್ಯಾಪ್ತಿಗೆ ಬರುವ ಶಿಗ್ಗಾಂವಿ ಕ್ಷೇತ್ರ ಒಳಗೊಂಡಂತೆ 224 ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಮತಗಟ್ಟೆ ಅಧ್ಯಕ್ಷಾಧಿಕಾರಿಗಳು, ಸಹಾಯಕ ಅಧ್ಯಕ್ಷಾಧಿಕಾರಿಗಳು, ಮತಗಟ್ಟೆ ಅಧಿಕಾರಿ, ಸೂಕ್ಷ್ಮ ವೀಕ್ಷಕರು ಒಳಗೊಂಡಂತೆ 6,958 ಸಿಬ್ಬಂದಿಯನ್ನು ಚುನಾವಣೆಗೆ ನಿಯೋಜಿಲಾಗಿದೆ ಎಂದರು.
    ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಕ್ಷಯ ಶ್ರೀಧರ, ಸಹಾಯಕ ಚುನಾವಣಾಧಿಕಾರಿ ಪೂಜಾರ ವೀರಮಲ್ಲಪ್ಪ ವಿವಿಧ ಮಸ್ಟರಿಂಗ್ ಕೇಂದ್ರ ಹಾಗೂ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳಿಗೆ ಅಗತ್ಯ ಮಾರ್ಗದರ್ಶನ ಮಾಡಿದರು.
    ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ಕೇಂದ್ರ
    ಮಸ್ಟರಿಂಗ್ ಕಾರ್ಯ ಮೇ 6ರಂದು ಹಾಗೂ ಡಿ-ಮಸ್ಟರಿಂಗ್ ಕಾರ್ಯ ಮೇ 7ರಂದು ಜರುಗಲಿದೆ. ಹಾನಗಲ್ಲ ಪಟ್ಟಣದ ಶ್ರೀ ಕುಮಾರೇಶ್ವರ ಪ್ರಥಮ ದರ್ಜೆ ಕಾಲೇಜ್ ಹಾಗೂ ಎನ್.ಸಿ.ಜೆ.ಸಿ. ಪಿ.ಯು ಕಾಲೇಜ್, ಶಿಗ್ಗಾಂವಿ ಪಟ್ಟಣದ ಜೆ.ಎಂ.ಜೆ. ಶಾಲೆ, ಹಾವೇರಿ ನಗರದ ಹುಕ್ಕೇರಿ ಮಠದ ಶ್ರೀ ಶಿವಲಿಂಗೇಶ್ವರ ಮಹಿಳಾ ಪ್ರಥಮ ದರ್ಜೆ ಕಾಲೇಜ್, ಬ್ಯಾಡಗಿ ಪಟ್ಟಣದ ಎಸ್.ಜೆ.ವಿ ಹೈಸ್ಕೂಲ್, ಹಿರೇಕೆರೂರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಹಾಗೂ ರಾಣೆಬೆನ್ನೂರ ನಗರದ ರೋಟರಿ ಆಂಗ್ಲ ಮಾಧ್ಯಮ ಶಾಲೆ ಹಾಗೂ ರೋಟರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts