More

    ವಿಶೇಷ ಚೇತನ ಮಕ್ಕಳಿಗೆ ಹೆಚ್ಚು ಅವಕಾಶಗಳು ದೊರೆಯಬೇಕು

    ಹಾವೇರಿ: ದಿವ್ಯಾಂಗ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಇಲಾಖೆಯೊಂದಿಗೆ ಸಮುದಾಯ ಹಾಗೂ ಸ್ವಯಂ ಸೇವಾ ಸಂಸ್ಥೆಗಳು ಸಹಕಾರ ನೀಡುವ ಮೂಲಕ ವಿಶೇಷ ಚೇತನ ಮಕ್ಕಳಿಗೆ ಹೆಚ್ಚು ಹೆಚ್ಚು ಅವಕಾಶಗಳು ದೊರೆಯುವಂತೆ ಮಾಡಬೇಕಾದ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಗಿರೀಶ ಪದಕಿ ಹೇಳಿದರು.
    ನಗರದ ಜಿಲ್ಲಾ ಸಮನ್ವಯ ಶಿಕ್ಷಣ ಸಂಪನ್ಮೂಲ ಕೇಂದ್ರದಲ್ಲಿ ಶಿಕ್ಷಣ ಇಲಾಖೆ ಹಾಗೂ ಫೋರ್ಥ್ ವೇವ್ ಫೌಂಡೇಶನ್ ಸಹಯೋಗದಲ್ಲಿ ನಡೆದ ಎರಡು ದಿನಗಳ ಅಂತರ್ಗತ ಶಿಕ್ಷಣಕ್ಕಾಗಿ ಸಾಮರ್ಥ್ಯ ಅಭಿವೃದ್ಧಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಅವರಿಗೆ ಅನುಕಂಪದ ಬದಲಾಗಿ ಹೆಚ್ಚು ಅವಕಾಶಗಳನ್ನು ಒದಗಿಸಿದಲ್ಲಿ ಅವರೂ ಸಾಮಾನ್ಯ ಮಕ್ಕಳಂತೆ ಬೆಳೆದು ಸಮಾಜದ ಮುಖ್ಯ ಭೂಮಿಕೆಗೆ ಬಂದು ದೇಶದ ಪ್ರಗತಿಗೆ ಪೂರಕವಾಗುತ್ತಾರೆ ಎಂದು ತಿಳಿಸಿದರು.
    ಕಾರ್ಯಾಗಾರದಲ್ಲಿ ಡಯಟ್‌ನ ಹಿರಿಯ ಉಪನ್ಯಾಸಕ ಶ್ಯಾಮಸುಂದರ ಅಡಿಗ, ಕರ್ನಾಟಕ ರಾಜ್ಯ ಜಾನಪದ ಪರಿಷತ್ ಅಧ್ಯಕ್ಷ ಡಾ.ಶ್ರೀಶೈಲ ಹುದ್ದಾರ, ಫೋರ್ಥ್ ವೇವ್ ಫೌಂಡೇಶನ್ ಮುಖ್ಯಸ್ಥ ರವಿ ಜಿ., ಎಪಿಸಿಓ ಸಿದ್ರಾಮಪ್ಪ ಅಜಗೊಂಡ್ರ ಹಾಗೂ ಆನಂದ ಉರ್ಮಿ, ಉತ್ತರ ಕರ್ನಾಟಕದ ಸಂಯೋಜಕ ಬಸವರಾಜ ಮ್ಯಾಗೇರಿ, ಸಂಪನ್ಮೂಲ ವ್ಯಕ್ತಿಗಳು ಹಾಗೂ ಜಿಲ್ಲೆಯ ಸಮನ್ವಯ ಶಿಕ್ಷಣ ಸಂಪನ್ಮೂಲ ಶಿಕ್ಷಕರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts