More

    ಮೊಬೈಲ್ ಬಿಡಿ, ಕ್ರೀಡಾಂಗಣಕ್ಕೆ ಬನ್ನಿ; ಜಿಲ್ಲಾ ಮಟ್ಟದ ಕ್ರೀಡಾಕೂಟ ಸಮಾರಂಭದಲ್ಲಿ ಮಕ್ಕಳಿಗೆ ಡಿಡಿಪಿಐ ಗಿರೀಶ ಪದಕಿ ಕಿವಿಮಾತು

    ಹಾವೇರಿ: ಮೊಬೈಲ್ ಗೀಳು ಬಿಡಿಸಿ ಆಟೋಟ, ಕ್ರೀಡಾ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳಲು ಪಾಲಕರು ಪ್ರೇರೇಪಣೆ ನೀಡಬೇಕು. ಮಕ್ಕಳು ಮೊಬೈಲ್, ಇಂಟರ್‌ನೆಟ್ ಎಂದು ಕಾಲಹರಣ ಮಾಡುವುದನ್ನು ಬಿಟ್ಟು ಕ್ರೀಡಾಂಗಣಕ್ಕೆ ಬರಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಿರೀಶ ಪದಕಿ ಸಲಹೆ ನೀಡಿದರು.
    ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ದೈಹಿಕ ಶಿಕ್ಷಣ ವಿಭಾಗ ಹಾಗೂ ಜಿಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರ ಸಂಘಗಳ ಸಹಯೋಗದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
    ಬದಲಾದ ಜೀವನಶೈಲಿಯಲ್ಲಿ ಮಕ್ಕಳು ಆಟ ಆಡುವ ಮನೋಭಾವ ಕಳೆದುಕೊಂಡಿದ್ದಾರೆ. ಟಿವಿ, ಮೊಬೈಲ್ ಹಾಗೂ ಲ್ಯಾಪ್‌ಟಾಪ್ ನಂತಹ ಆಧುನಿಕ ತಂತ್ರಜ್ಞಾನವೇ ಅವರ ಜೀವನಶೈಲಿಯಾಗಿದೆ. ಮಕ್ಕಳು ಹೆಚ್ಚು ಕ್ರೀಡೆಯಲ್ಲಿ ತೊಡಗಿಕೊಂಡು ದೈಹಿಕ ಹಾಗೂ ಮಾನಸಿಕವಾಗಿ ಸದೃಢತೆ ಹೊಂದಬೇಕು ಎಂದರು.
    ಶಿಕ್ಷಣಾಧಿಕಾರಿ ಮೌನೇಶ ಬಡಿಗೇರ ಕ್ರೀಡಾ ಜ್ಯೋತಿಯನ್ನು ಅತಿಥಿಗಳಿಗೆ ಹಸ್ತಾಂತರಿಸಿದರು. ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಅಮೃತಗೌಡ ಪಾಟೀಲ ಕ್ರೀಡಾ ಧ್ವಜಾರೋಹಣ ನೆರವೇರಿಸಿದರು. ರಮೇಶ ಹೊಸಮನಿ ಕ್ರೀಡಾ ಪ್ರತಿಜ್ಞಾ ವಿಧಿ ಬೋಧಿಸಿದರು. ಕ್ರೀಡಾಕೂಟದ ಅಂಗವಾಗಿ ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ಜರುಗಿತು.
    ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳಾದ ಎಸ್.ಎಸ್.ಅಡಿಗ, ನಿರಂಜನ ಮೂರ್ತಿ, ಎಂ.ಎ ಎಣ್ಣಿ, ಜಿಲ್ಲಾ ಉರ್ದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಕಾರ್ಯದರ್ಶಿ ಪಿ. ಟಿ ಕಾಮನಹಳ್ಳಿ, ಬಿ.ಎಸ್ ಪಾಟೀಲ, ಎಸ್.ಬಿ.ಅಜ್ಜಗೊಂಡರ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಬಿ.ಶಾಂತಗಿರಿ, ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಕಾರ್ಯದರ್ಶಿ ಎನ್.ಎನ್ ಕುಂದೂರ, ಜಿಲ್ಲಾ ವೃತ್ತಿ ಶಿಕ್ಷಕರ ಸಂಘದ ಕಾರ್ಯದರ್ಶಿ ಯಾಸಿನ್ ಹರಗೋಲ, ತಾಲೂಕ ದೈಹಿಕ ಶಿಕ್ಷಣಾಧಿಕಾರಿ ಆರ್.ಜಿ ಮೇಟಿ, ಹನುಮಂತಪ್ಪ, ಸಿಕಂದರ್ ಮುಲ್ಲಾ, ಮತ್ತಿತರರು ಉಪಸ್ಥಿತರಿದ್ದರು.
    ವಿಷಯ ಪರಿವೀಕ್ಷಕ ಮಂಜಪ್ಪ ಆರ್.ಸ್ವಾಗತಿಸಿದರು. ಎಸ್.ಎಸ್.ನಡುವಿನಮಠ ನಿರೂಪಿಸಿದರು. ವಿಷಯ ಪರಿವೀಕ್ಷಕ ಈರಪ್ಪ ಲಮಾಣಿ ವಂದಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts